Colonel Sofiya Qureshi ಬಗ್ಗೆ ವಿವಾದಾತ್ಮಕ ಹೇಳಿಕೆ: 'ನನ್ನ ಮಾತಿನ ಅರ್ಥ ಅದಾಗಿರಲಿಲ್ಲ.. 1 ಅಲ್ಲ 10 ಬಾರಿ ಕ್ಷಮೆ ಕೋರುತ್ತೇನೆ': BJP ನಾಯಕ Vijay Shah

ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು 'ಭಯೋತ್ಪಾದಕರ ಸಹೋದರಿ' ಎಂದು ಕರೆದಿದ್ದರು.
Colonel Sophia Qureshi Remark
ಕರ್ನಲ್ ಸೋಫಿಯಾ ಖುರೇಷಿ ಮತ್ತು ಬಿಜೆಪಿ ನಾಯಕ ವಿಜಯ್ ಶಾ
Updated on

ಭೋಪಾಲ್: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಬ್ರೀಫಿಂಗ್ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Sofiya Qureshi) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೊನೆಗೂ ಕ್ಷಮೆ ಕೋರಿದ್ದಾರೆ.

ಮಧ್ಯಪ್ರದೇಶ ಬಿಜೆಪಿ ನಾಯಕ ಹಾಗೂ ಸಚಿವ ವಿಜಯ್ ಶಾ (Vijay Shah) ಕರ್ನಲ್ ಸೋಫಿಯಾ ಖುರೇಷಿ (Sofiya Qureshi) ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರದೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು 'ಭಯೋತ್ಪಾದಕರ ಸಹೋದರಿ' ಎಂದು ಕರೆದಿದ್ದರು.

ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ವಿಜಯ್ ಶಾ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Colonel Sophia Qureshi Remark
'ಕರ್ನಲ್ Sophia Qureshi ಭಯೋತ್ಪಾದಕರ ಸಹೋದರಿ': BJP ಮುಖಂಡನ ಹೇಳಿಕೆ, Congress ಆಕ್ರೋಶ; Video

ನನ್ನ ಮಾತಿನ ಅರ್ಥ ಅದಾಗಿರಲಿಲ್ಲ.. 1 ಅಲ್ಲ 10 ಬಾರಿ ಕ್ಷಮೆ ಕೋರುತ್ತೇನೆ

ಇನ್ನು ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಧ್ಯ ಪ್ರದೇಶ ಸಚಿವ ವಿಜಯ್ ಶಾ, ಸಹೋದರಿ ಸೋಫಿಯಾ ಖುರೇಷಿ ಬಗ್ಗೆ ನಾನು ಕನಸಿನಲ್ಲೂ ಆ ರೀತಿ ಭಾವಿಸಲು ಸಾಧ್ಯವಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಿಸ್ಟರ್ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅವರು ನಮ್ಮ ಸ್ವಂತ ಸಹೋದರಿಗಿಂತ ಹೆಚ್ಚು ಗೌರವಾನ್ವಿತರು.

ಅವರು ರಾಷ್ಟ್ರಕ್ಕೆ ಮಾಡಿದ ಸೇವೆಗೆ ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ಕನಸಿನಲ್ಲಿಯೂ ಅವರನ್ನು ಅವಮಾನಿಸುವ ಬಗ್ಗೆ ನಾವು ಯೋಚಿಸಲು ಸಹ ಸಾಧ್ಯವಿಲ್ಲ. ಆದರೂ, ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಒಂದಲ್ಲ ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ" ಎಂದು ಅವರು ಹೇಳಿದ್ದಾರೆ.

ಇಷ್ಟಕ್ಕೂ ವಿಜಯ್ ಶಾ ಹೇಳಿದ್ದೇನು?

ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಹಲ್ಮಾ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಮಾಡಿದ ಭಾಷಣದ ಕ್ಲಿಪ್ ಅನ್ನು ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಆ ವಿಡಿಯೋದಲ್ಲಿ ಸಚಿವ ವಿಜಯ್ ಶಾ, ಹಿಂದಿಯಲ್ಲಿ, "ಅವರು (ಭಯೋತ್ಪಾದಕರು) ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಒರೆಸುವ ಮೂಲಕ ಅವರನ್ನು ಅಗೌರವಗೊಳಿಸಿದ್ದರು.

ಆದರೆ ಅವರಿಗೆ ಸೂಕ್ತ ಉತ್ತರ ನೀಡಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ" ಎಂದು ಹೇಳುತ್ತಿರುವುದು ಕೇಳಿಬರುತ್ತದೆ. ಇಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಮಹಿಳೆ ಕರ್ನಲ್ ಸೋಫಿಯಾ ಖುರೇಷಿ ಮಟ್ಟಹಾಕಿದ್ದಾರೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಭಾರತ ನಡೆಸಿದ ಬಲವಾದ ಪ್ರತೀಕಾರಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸುವಾಗ ವಿಜಯ್ ಶಾ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದಿದ್ದರೂ, ಅವರ ಹೇಳಿಕೆಗಳನ್ನು ಕರ್ನಲ್ ಸೋಫಿಯಾ ಖುರೇಷಿಯ ಪರೋಕ್ಷ ಉಲ್ಲೇಖವೆಂದು ವ್ಯಾಪಕವಾಗಿ ಅರ್ಥೈಸಲಾಗಿದೆ. ಈ ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು ಮಾತ್ರವಲ್ಲದೇ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಕೆಂಡಾಮಂಡಲ

ಈ ವಿಡಿಯೋವನ್ನು ಹಂಚಿಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್, 'ಕರ್ನಲ್ ಸೋಫಿಯಾ ಖುರೇಷಿ ಭಯೋತ್ಪಾದಕರ ಸಹೋದರಿ' - ಈ ಅವಮಾನಕರ ಹೇಳಿಕೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಅವರು ನೀಡಿದ್ದಾರೆ. ಪ್ರತಿಯೊಬ್ಬ ಭಾರತೀಯನೂ ಭಾರತದ ಮಗಳು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಹೆಮ್ಮೆಪಡುತ್ತಾರೆ.

ಆದರೆ ಅವರ ಬಗ್ಗೆ ಅಂತಹ ನಾಚಿಕೆಗೇಡಿನ ಹೇಳಿಕೆಯನ್ನು ನೀಡಲಾಗಿದೆ. ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಹಣೆಪಟ್ಟಿ ಕಟ್ಟಲಾಗಿದೆ. ಇದು ನಮ್ಮ ವೀರ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ" ಎಂದು ಕಾಂಗ್ರೆಸ್ ವಿಡಿಯೋವನ್ನು ಹಂಚಿಕೊಂಡಿದೆ.

ಅಂತೆಯೇ ವಿವಾದಾತ್ಮಕ ಹೇಳಿಕೆಯನ್ನು ಪ್ರಶ್ನಿಸಿದ ಕಾಂಗ್ರೆಸ್, 'ವಿಜಯ್ ಶಾ ನರೇಂದ್ರ ಮೋದಿಯವರ ಆಪ್ತ ಸಹಚರ ಎಂದು ಹೇಳಿಕೊಂಡು ಅವರನ್ನು ತಮ್ಮ ಮಾರ್ಗದರ್ಶಕ ಎಂದು ಕರೆದರೆ, ಬಿಜೆಪಿ ಅವರ ರಾಜೀನಾಮೆಗೆ ಒತ್ತಾಯಿಸುತ್ತದೆಯೇ? ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಈ ನೀಚ ಮನಸ್ಥಿತಿಗೆ ಕ್ಷಮೆಯಾಚಿಸುತ್ತಾರೆಯೇ? ಅಥವಾ, ಎಂದಿನಂತೆ, ವಿಜಯ್ ಶಾ ಅವರ ಈ ಶೋಚನೀಯ ಮನಸ್ಥಿತಿಗೆ ಪ್ರತಿಫಲವಾಗಿ, ಅವರ ಬೆಂಬಲಕ್ಕಾಗಿ ರ್ಯಾಲಿಗಳನ್ನು ನಡೆಸಲಾಗುತ್ತದೆಯೇ?" ಎಂದು ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com