
ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನದ ವಿರುದ್ಧದ ಪ್ರತೀಕಾರವಾಗಿ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿರುವ ಭಾರತ, ನೀರನ್ನು ಬೇರೆ ಕಡೆ ತಿರುಗಿಸಲು ಯೋಜಿಸುತ್ತಿದೆ. ಅಲ್ಲದೇ, ಪ್ರಮುಖ ಕಾಲುವೆ ಹಾಗೂ ಜಲ ವಿದ್ಯುತ್ ವಿಸ್ತರಣೆಗೆ ಪ್ರಸ್ತಾಪಿಸಿದೆ.
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವನ್ನು ದೂಷಿಸಿರುವ ಭಾರತ, ಪ್ರತೀಕಾರವಾಗಿ ಪಾಕಿಸ್ತಾನದ ಜಮೀನುಗಳಿಗೆ ನೀರುಣಿಸುವ ಸಿಂಧೂ ನದಿಯ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲು ಭಾರತ ಯೋಜಿಸುತ್ತಿದೆ ಎಂದು ನಂಬಲಾರ್ಹ ಮೂಲಗಳಿಂದ ತಿಳಿದುಬಂದಿದೆ.
ಕಾಶ್ಮೀರದಲ್ಲಿ 26 ಜನರು ಹತ್ಯೆಯಾದ ಸ್ವಲ್ಪ ಸಮಯದ ನಂತರ 1960 ರ ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿತು.
ಏನಿದು ಸಿಂಧೂ ನದಿ: ವಿಶ್ವ ಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಡೆದ ಸಿಂಧೂ ನದಿ ಒಪ್ಪಂದದ ಪ್ರಕಾರ, ಪೂರ್ವದ ನದಿಗಳ ನೀರನ್ನು ಭಾರತವು ಬಳಸಿಕೊಳ್ಳಬಹುದು. ಪಶ್ಚಿಮದ ನದಿಗಳ ನೀರನ್ನು ಪಾಕಿಸ್ತಾನವು ಹೆಚ್ಚಾಗಿ ಬಳಸುತ್ತದೆ.
ಭಾರತವು ಪಶ್ಚಿಮ ನದಿಗಳ ಮೇಲೆ ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಬಹುದು. ಆದರೆ, ಕೆಲವು ನಿಯಮಗಳನ್ನು ಪಾಲಿಸಬೇಕು. ಪಾಕಿಸ್ತಾನವು ಭಾರತದ ಯೋಜನೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಸಿಂಧೂ ನದಿ ಒಪ್ಪಂದದನ್ವಯ ಭಾರತಕ್ಕೆ ಪೂರ್ವ ನದಿಗಳಾದ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳ ನೀರನ್ನು ಬಳಸುವ ಹಕ್ಕಿದೆ. ಅದೇ ರೀತಿ ಪಾಕಿಸ್ತಾನಕ್ಕೆ ಪಶ್ಚಿಮ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್ ನದಿಗಳ ನೀರನ್ನು ಬಳಸುವ ಹಕ್ಕಿದೆ. ಆದರೆ ಈಗ ಭಾರತ ತನಗೆ ಇಷ್ಟ ಬಂದ ಸಮಯದಲ್ಲಿ ನೀರನ್ನು ಜಲಾಶಯದಿಂದ ಹರಿಸುತ್ತಿದೆ.
ಚೀನಾಬ್, ಝೀಲಂ ಮತ್ತು ಸಿಂಧೂ ನದಿಗಳ ಯೋಜನೆ ಕಾರ್ಯಗತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
Advertisement