
ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಘೋಷಣೆಯಾಗಿದ್ದ ಕದನ ವಿರಾಮವನ್ನು ಮೇ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾರವಣ ನಿರ್ಣಾಣವೀಗಿತ್ತು. ಉಭಯ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು.
ಭಾರತೀಯ ಸೇನೆ ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ತಕ್ಕ ಉತ್ತರ ನೀಡಿತ್ತು. ಆ ಬಳಿಕ ಉಭಯ ದೇಶಗಳ ಉನ್ನತ ಸೇನಾಧಿಕಾರಿಗಳ ನಡುವಿನ ಮಾತುಕತೆ ಬಳಿಕ ಎರಡು ದೇಶಗಳು ಕದನ ವಿರಾಮ ಘೋಷಣೆಗೆ ಒಪ್ಪಿದ್ದವು. ಈ ಕದನ ವಿರಾಮವನ್ನು ಇದೀಗ ಮೇ18ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ,
ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಮತ್ತು ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು ಗುರುವಾರ ಹಾಟ್‌ಲೈನ್‌ನಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸಿದ್ದಾರೆಂದು ಹೇಳಿಕೊಂಡಿದ್ದು, ಕದನ ವಿರಾಮವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement