ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಅಮಾನತು ಮುಂದುವರಿಯಲಿದೆ: ಕೇಂದ್ರ ಸರ್ಕಾರ

"ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ" ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಸಿಂಧೂ ನದಿ
ಸಿಂಧೂ ನದಿ
Updated on

ನವದೆಹಲಿ: "ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ "ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರಿಯಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ಕ್ಯಾಬಿನೆಟ್ ಕಾರ್ಯದರ್ಶಿಗೆ ತಿಳಿಸಿದೆ.

ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರಿಗೆ ಮಂಗಳವಾರ ನೀಡಿದ ಮಾಸಿಕ ವರದಿಯಲ್ಲಿ, ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಬರುವ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ "ಪಾಕಿಸ್ತಾನ ಪ್ರಾಯೋಜಿತ" ಭಯೋತ್ಪಾದಕ ದಾಳಿಯ ನಂತರ "ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲಾಗಿದ್ದು, ಅದು ಮುಂದುವರೆಯಲಿದೆ" ಎಂದು ಹೇಳಿದ್ದಾರೆ.

"ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ" ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಸಿಂಧೂ ನದಿ
Watch | ಗಡಿಯಾಚೆಗಿನ ಭಯೋತ್ಪಾದನೆ ನಿಲ್ಲಿಸುವವರೆಗೆ ಸಿಂಧೂ ನದಿ ಜಲ ಒಪ್ಪಂದ ಸ್ಥಗಿತ

1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಸಿಂಧೂ ಜಲ ಒಪ್ಪಂದ(IWT) ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ಹಂಚಿಕೆ ಮತ್ತು ಬಳಕೆಯನ್ನು ನಿಯಂತ್ರಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com