
ನವದೆಹಲಿ: ಭಾರತದ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು, ಮಾಜಿ ಸಂಸದೆಯಾಗಿ ತಮ್ಮ ಸಂಪೂರ್ಣ ಪಿಂಚಣಿ ಮತ್ತು ಇತರ ಸವಲತ್ತುಗಳನ್ನು ರಾಷ್ಟ್ರೀಯ ರಕ್ಷಣಾ ನಿಧಿಗೆ ದೇಣಿಗೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಮೃತಿ ಇರಾನಿ, "ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ನಾಗರಿಕ ಮತ್ತು ಕಾರ್ಯತಂತ್ರದ ಸಲಹೆಗಾರರಾಗಿ, ಇಂದು ಇಡೀ ಒಕ್ಕೂಟವು ಭಾರತದ ರಾಷ್ಟ್ರೀಯ ರಕ್ಷಣಾ ನಿಧಿಗೆ ನಮ್ಮ ಕಡೆಯಿಂದ ಕೊಡುಗೆ ನೀಡುವುದಾಗಿ ಪ್ರತಿಜ್ಞೆ ಮಾಡಿದೆ ಎಂದರು.
ಕಳೆದ ವರ್ಷದಿಂದ, ನಾನು ಮಾಜಿ ಸಂಸದೆಯಾಗಿ ನನ್ನ ಪಿಂಚಣಿ ಅಥವಾ ಇತರೆ ಯಾವುದೇ ಸೌಲಭ್ಯವನ್ನು ತೆಗೆದುಕೊಂಡಿಲ್ಲ. ಇದು ಭಾರತದ ಖಜಾನೆಯ ಹಣ, ಇದನ್ನು ನಾನು ಇಂದು ರಾಷ್ಟ್ರೀಯ ರಕ್ಷಣಾ ನಿಧಿಗೆ ಅರ್ಪಿಸುತ್ತಿದ್ದೇನೆ" ಎಂದರು.
ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ನೀಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಟರ್ಕಿ ಮತ್ತು ಅಜೆರ್ಬೈಜಾನ್‌ನೊಂದಿಗಿನ ಎಲ್ಲಾ ವ್ಯಾಪಾರವನ್ನು ಕೊನೆಗೊಳಿಸುವ ಅಖಿಲ ಭಾರತ ವ್ಯಾಪಾರಿಗಳ ಸಂಘದ ನಿರ್ಧಾರವನ್ನು ಬಿಜೆಪಿ ನಾಯಕಿ ಶ್ಲಾಘಿಸಿದರು ಮತ್ತು ಇದು ರಾಷ್ಟ್ರದ ಗಡಿಗಳನ್ನು ಕಾಯುವ ಭಾರತದ ಧೈರ್ಯಶಾಲಿ ಪುತ್ರರು ಮತ್ತು ಪುತ್ರಿಯರಿಗೆ ಬೆಂಬಲವನ್ನು ಸೂಚಿಸುತ್ತದೆ ಎಂದು ಹೇಳಿದರು.
ಬಹಿಷ್ಕಾರದ ಮೂಲಕ, ವ್ಯಾಪಾರಿಗಳ ಸಂಘವು ಭಾರತೀಯ ಆರ್ಥಿಕತೆಯನ್ನು ಬಲಪಡಿಸಲು ಕೊಡುಗೆ ನೀಡುತ್ತಿದೆ ಮತ್ತು ಮೇಕ್ ಇನ್ ಇಂಡಿಯಾ ಕನಸನ್ನು ನನಸಾಗಿಸಲು ಯತ್ನಿಸುತ್ತದೆ ಎಂದು ಸ್ಮೃತಿ ಇರಾನಿ ತಿಳಿಸಿದರು.
Advertisement