ಅಭದ್ರತೆ ಅಥವಾ ಅಸೂಯೆಯೇ? ಶಶಿ ತರೂರ್ ಕಡೆಗಣನೆಗೆ ಕಾಂಗ್ರೆಸ್ ಕುಟುಕಿದ ಬಿಜೆಪಿ!

ಕಾಂಗ್ರೆಸ್ ಪಕ್ಷವು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಲೋಕಸಭೆಯಲ್ಲಿ ಐಎನ್‌ಸಿ ಉಪ ನಾಯಕ ಗೌರವ್ ಗೊಗೊಯ್, ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್ ಮತ್ತು ಲೋಕಸಭಾ ಸಂಸದ ರಾಜಾ ಬ್ರಾರ್ ಅವರ ಹೆಸರುಗಳನ್ನು ಸೂಚಿಸಿತ್ತು.
Shashi Tharoor
ಶಶಿ ತರೂರ್
Updated on

ನವದೆಹಲಿ: ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಸರ್ಕಾರ ನಿಯೋಜಿಸಲಿರುವ ಏಳು ನಿಯೋಗಕ್ಕೆ ಸಂಸದ ಶಶಿ ತರೂರ್ ಹೆಸರನ್ನು ಸೂಚಿಸದ ಕಾಂಗ್ರೆಸ್ ನಡೆಗೆ ಬಿಜೆಪಿ ಅಚ್ಚರಿ ವ್ಯಕ್ತಪಡಿಸಿದೆ. ಹೈಕಮಾಂಡ್ ನ್ನು ಮೀರಿಸುವರೆಂದು ಅವರನ್ನು ನಾಮ ನಿರ್ದೇಶನ ಮಾಡಲಿಲ್ಲವೇ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಪಕ್ಷವು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಲೋಕಸಭೆಯಲ್ಲಿ ಐಎನ್‌ಸಿ ಉಪ ನಾಯಕ ಗೌರವ್ ಗೊಗೊಯ್, ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್ ಮತ್ತು ಲೋಕಸಭಾ ಸಂಸದ ರಾಜಾ ಬ್ರಾರ್ ಅವರ ಹೆಸರುಗಳನ್ನು ಸೂಚಿಸಿತ್ತು.

ತಾನು ನೀಡಿರುವ ಸಂಸದರ ಪಟ್ಟಿಯನ್ನು "ಬದಲಾಯಿಸುವುದಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ಇಲಾಖೆ ಮುಖ್ಯಸ್ಥ ಅಮಿತ್ ಮಾಳವೀಯಾ, ಸಂಸದ ಶಶಿ ತರೂರ್ ಅವರನ್ನು ಹೈಕಮಾಂಡ್ ನ್ನು ಮೀರಿಸಿದ್ದರಿಂದ ಅವರನ್ನು ನಾಮ ನಿರ್ದೇಶನ ಮಾಡಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಶಶಿ ತರೂರ್ ಅರ ವಾಗ್ಚಾತುರ್ಯ, ವಿಶ್ವಸಂಸ್ಥೆಯ ಅಧಿಕಾರಿಯಾಗಿ ಅವರ ದೀರ್ಘ ಅನುಭವ ಮತ್ತು ವಿದೇಶಾಂಗ ನೀತಿಯ ವಿಷಯಗಳ ಬಗ್ಗೆ ಅವರ ಆಳವಾದ ಒಳನೋಟವನ್ನು ಯಾರು ಅಲ್ಲಗಳೆಯಲು ಸಾಧ್ಯವಿಲ್ಲ. ಹಾಗಾದರೆ, ಕಾಂಗ್ರೆಸ್ ಪಕ್ಷ ಮತ್ತು ವಿಶೇಷವಾಗಿ ರಾಹುಲ್ ಗಾಂಧಿ, ಮಹತ್ವದ ವಿಷಯಗಳ ಕುರಿತು ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಲಾಗುತ್ತಿರುವ ಸರ್ವ ಪಕ್ಷ ನಿಯೋಗಗಳಿಗೆ ಅವರ ಹೆಸರನ್ನು ಸೂಚಿಸದಿರಲು ಕಾರಣವೇನು? ಇದು ಅಭದ್ರತೆಯೇ? ಅಸೂಯೆಯೇ? ಅಥವಾ ಹೈಕಮಾಂಡ್ ನ್ನು ಮೀರಿಸುವರೆಂದು ಯಾರಿಗಾದರೂ ಅಸಹಿಷ್ಣುತೆಯೇ ಎಂದು ಪ್ರಶ್ನಿಸಿದ್ದಾರೆ.

ಅಮಿತ್ ಮಾಳವೀಯಾ, ಮತ್ತೊಂದು ಫೋಸ್ಟ್ ನಲ್ಲಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್ ಅವರ ಹೆಸರನ್ನು ಸೂಚಿಸಿರುವುದಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯಸಭಾ ಸದಸ್ಯರಾಗಿ ಚುನಾಯಿತರಾದಾಗ ವಿಧಾನಸೌಧದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾಂದ್ ಅಂತಾ ಘೋಷಣೆ ಕೂಗಿದ್ದರು. ಈ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

Shashi Tharoor
ವಿದೇಶಗಳಿಗೆ ಸರ್ವಪಕ್ಷ ನಿಯೋಗ: ನನ್ನ ಸಾಮರ್ಥ್ಯ, ಕೊರತೆ ಬಗ್ಗೆ ವಿವರಿಸುವುದು ಪಕ್ಷದ ವರಿಷ್ಠರ ಜವಾಬ್ದಾರಿ; ಕಾಂಗ್ರೆಸ್ ಆಕ್ಷೇಪಕ್ಕೆ ಶಶಿ ತರೂರ್ ತಿರುಗೇಟು! Video

ಕಾಂಗ್ರೆಸ್ ಪಕ್ಷದಲ್ಲಿದ್ದರೂ ಭಾರತದ ಪರವಾಗಿ ಮಾತನಾಡುವ ಪ್ರತಿಯೊಬ್ಬ ವ್ಯಕ್ತಿಯನ್ನು ರಾಹುಲ್ ಗಾಂಧಿ ಯಾಕೆ ದ್ವೇಷಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com