
ನವದೆಹಲಿ: ಆಪರೇಷನ್ ಸಿಂಧೂರ್‌ನ ಭಾಗವಾಗಿ ಭಯೋತ್ಪಾದಕರ ಮೂಲಸೌಕರ್ಯವನ್ನು ಗುರಿಯಾಗಿಸುವ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ಅಪರಾಧವಾಗಿದ್ದು, ಅದಕ್ಕೆ ಯಾರು ಅಧಿಕಾರ ನೀಡಿದವರು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ..
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ಸರ್ಕಾರ ಪಾಕಿಸ್ತಾನಕ್ಕೆ ಈ ಕ್ರಮದ ಬಗ್ಗೆ ತಿಳಿಸಿತ್ತು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದರು. ಇದರ ಪರಿಣಾಮ ಭಾರತೀಯ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು ಎಂದು ಪ್ರಶ್ನಿಸಿದ್ದಾರೆ.
ಭಯೋತ್ಪಾದಕ ಮೂಲಸೌಕರ್ಯಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನಕ್ಕೆ ತಿಳಿಸಿದೆ ಎಂದು ಎಂದು ಜೈಶಂಕರ್ ಹೇಳಿರುವ ದಿನಾಂಕವಿಲ್ಲದ ವೀಡಿಯೊವೊಂದನ್ನು ಅವರು ಹಂಚಿಕೊಂಡಿದ್ದಾರೆ.
ಕಾರ್ಯಾಚರಣೆ ಆರಂಭದಲ್ಲಿ ನಾವು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೇವೆ. ನಾವು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಮತ್ತು ನಾವು ಮಿಲಿಟರಿ ಮೇಲೆ ದಾಳಿ ಮಾಡುತ್ತಿಲ್ಲ ಎದು ಹೇಳಿರುವುದು ವಿಡಿಯೋದಲ್ಲಿದೆ.
ಆದರೆ ಜೈಶಂಕರ್ ಆ ರೀತಿ ಹೇಳಿದ್ದಾರೆ ಎಂಬುದನ್ನು ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (PIB) ತಳ್ಳಿ ಹಾಕಿದೆ. ಸಚಿವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಅವರನ್ನು ತಪ್ಪಾಗಿ ಉಲ್ಲೇಖಿಸಲಾಗುತ್ತಿದೆ ಎಂದು PIB ಫ್ಯಾಕ್ಟ್ ಚೆಕ್ ಯೂನಿಟ್ ಹೇಳಿದೆ.
ಆಪರೇಷನ್ ಸಿಂಧೂರ್ ಆರಂಭದಲ್ಲಿ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೇವು ಎಂದು ಡಾ ಎಸ್ ಜೈಶಂಕರ್ ಹೇಳಿದ್ದಾರೆ. ಇದನ್ನು ಆಪರೇಷನ್ ಮುನ್ನಾ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು MEA ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
Advertisement