ಹೈದರಾಬಾದ್ ನ ಚಾರ್ಮಿನಾರ್ ಬಳಿ ಅಗ್ನಿ ದುರಂತ: 8 ಮಕ್ಕಳು ಸೇರಿ 17 ಮಂದಿ ಸಾವು, ಪ್ರಧಾನಿ ಪರಿಹಾರ ಘೋಷಣೆ

ಗಾಯಗೊಂಡವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ. ಎಲ್ಲರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ಹೈದರಾಬಾದ್ ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ ನಂತರದ ದೃಶ್ಯ
ಹೈದರಾಬಾದ್ ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ ನಂತರದ ದೃಶ್ಯ
Updated on

ಹೈದರಾಬಾದ್: ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಆಭರಣ ಅಂಗಡಿಯಲ್ಲಿ ಇಂದು ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 8 ಮಕ್ಕಳು ಸೇರಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೆ ತುರ್ತು ಕರೆ ಬಂದು ನಂತರ 12 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ಹಲವಾರು ಗಂಟೆಗಳ ಕಾಲ ಮುಂದುವರೆದವು.

ಗಾಯಗೊಂಡವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬೆಂಕಿಯ ಕಾರಣ ಮತ್ತು ನಡೆಯುತ್ತಿರುವ ರಕ್ಷಣಾ ಪ್ರಯತ್ನಗಳ ಬಗ್ಗೆ ವಿಚಾರಿಸಿದರು.

ಹೈದರಾಬಾದ್ ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ ನಂತರದ ದೃಶ್ಯ
ಹಾಸಿಗೆ ತಯಾರಿಕಾ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಾವು, 10 ಮಂದಿಗೆ ಗಾಯ

ಪ್ರಧಾನಿ ಪರಿಹಾರ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ. ಘಟನೆಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com