ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ

ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್‌ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
 ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ
ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ
Updated on

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್‌ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಅಗ್ನಿ ಅವಘಡದಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್‌ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.

 ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ
ಹೈದರಾಬಾದ್ ನ ಚಾರ್ಮಿನಾರ್ ಬಳಿ ಅಗ್ನಿ ದುರಂತ: 8 ಮಕ್ಕಳು ಸೇರಿ 17 ಮಂದಿ ಸಾವು, ಪ್ರಧಾನಿ ಪರಿಹಾರ ಘೋಷಣೆ

ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಐದರಿಂದ ಆರು ಗಂಟೆಗಳು ಬೇಕಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com