ಕರ್ನಲ್ ಖುರೇಷಿ ವಿರುದ್ಧ ಸಚಿವ ವಿಜಯ್ ಶಾ ಹೇಳಿಕೆ: ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ನ್ಯಾಯಾಲಯವು ಶಾ ಅವರ ಕ್ಷಮೆಯಾಚನೆಯನ್ನು ತಿರಸ್ಕರಿಸಿತು ಮತ್ತು “ನಿಮ್ಮದು ಯಾವ ರೀತಿಯ ಕ್ಷಮೆಯಾಚನೆ?” ಎಂದು ಕೇಳಿತು.
Sofiya kureshi and vijay shah
ಸೋಫಿಯಾ ಖುರೇಷಿ ಮತ್ತು ವಿಜಯ್ ಶಾ
Updated on

ಭೋಪಾಲ್: ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೋಮವಾರ ತಡರಾತ್ರಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಮಧ್ಯಪ್ರದೇಶ ಪೊಲೀಸರು ರಚಿಸಿದ್ದಾರೆ.

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದು ಕರೆದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಷಾ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಹಾಗೂ ಈ ಕೂಡಲೇ ಈ ಪ್ರಕರಣದ ಅಡಿಯಲ್ಲಿ ತನಿಖೆ ಕೈಗೊಳ್ಳಲು ಎಸ್ಐಟಿ ರಚಿಸಿದೆ.

ಅದಕ್ಕೂ ಮೊದಲು ನ್ಯಾಯಾಲಯದ ಎದುರು ಪ್ರಕರಣಕ್ಕೆ ಕ್ಷಮೆ ಕೋರಿದ್ದ ಕುನ್ವರ್ ವಿಜಯ್ ಷಾಗೆ ನ್ಯಾಯಮೂರ್ತಿ ತೀವ್ರ ತರಾಟೆಗೆ ತೆಗೆದುಕೊಂಡರು. ನ್ಯಾಯಾಲಯವು ಶಾ ಅವರ ಕ್ಷಮೆಯಾಚನೆಯನ್ನು ತಿರಸ್ಕರಿಸಿತು ಮತ್ತು “ನಿಮ್ಮದು ಯಾವ ರೀತಿಯ ಕ್ಷಮೆಯಾಚನೆ?” ಎಂದು ಕೇಳಿತು.

ಇಂಥ ಹೇಳಿಕೆಯಿಂದ ಇಡೀ ದೇಶಕ್ಕೆ ನಾಚಿಕೆಯಾಗಿದೆ... ನೀವು ಕಾರ್ಯಕ್ರಮದಲ್ಲಿ ಮಾತನಾಡಿದ ವಿಡಿಯೊವನ್ನೂ ನೋಡಿದ್ದೇವೆ. ಅದ್ಯಾವ ಶಕ್ತಿ ನಿಮ್ಮನ್ನು ತಡೆಯಿತೊ ಗೊತ್ತಿಲ್ಲ. ನೀವು ಇನ್ನಷ್ಟು ಕೆಟ್ಟ ಮಾತು ಆಡಲು ನಿಮಗೆ ಪದಗಳೂ ಸಿಗದಿರಬಹುದು. ನಿಮಗೆ ನಾಚಿಕೆಯಾಗಬೇಕು’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

Sofiya kureshi and vijay shah
ಕರ್ನಲ್ ಸೋಫಿಯಾ ಖುರೇಷಿ ಕುರಿತು ನಿಂದನಾತ್ಮಕ ಹೇಳಿಕೆ: ಮಧ್ಯಪ್ರದೇಶ ಸಚಿವರ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ KPCC ಆಗ್ರಹ

ವಿಶೇಷ ತನಿಖಾ ತಂಡದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರಮೋದ್ ವರ್ಮಾ, ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಕಲ್ಯಾಣ್ ಚಕ್ರವರ್ತಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಾಹಿನಿ ಸಿಂಗ್ ಇದ್ದಾರೆ. ಮಧ್ಯಪ್ರದೇಶ ಹೈಕೋರ್ಟ್ ಆದೇಶದ ನಂತರ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಐಜಿ ಶ್ರೇಣಿಯ

ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ಎಸ್‌ಐಟಿ ರಚಿಸಬೇಕು. ಈ ತಂಡದಲ್ಲಿ ಮಹಿಳಾ ಅಧಿಕಾರಿಯೂ ಇರಬೇಕು. ತಂಡವು ತನ್ನ ಮೊದಲ ವರದಿಯನ್ನು ಮೇ 28ರ ಒಳಗಾಗಿ ಸಲ್ಲಿಸಬೇಕು’ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com