ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ FIR ದಾಖಲು

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
BJP IT Cell chief Amit Malviya, Republic TV Editor-in-Chief Arnab Goswami.
ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ
Updated on

ಬೆಂಗಳೂರು: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿವುದು) ಅಡಿಯಲ್ಲಿ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದಾರೆ.

ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ಅವರ ನಡೆ ಭಾರತದ ಪ್ರಜಾಪ್ರಭುತ್ವದ ಅಡಿಪಾಯ, ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ನಡೆಸಿದ ದುರುದ್ದೇಶಪೂರ್ವಕ ದಾಳಿಯಾಗಿದೆ. ದೂರನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತೀಯ ಪತ್ರಿಕಾ ಮಂಡಳಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಸಿಬಿಐ ಸೇರಿದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

BJP IT Cell chief Amit Malviya, Republic TV Editor-in-Chief Arnab Goswami.
ಮೀಸಲಾತಿ ಕುರಿತು ವೀಡಿಯೋ ಪೋಸ್ಟ್: ಜೆಪಿ ನಡ್ಡಾ, ಅಮಿತ್ ಮಾಳವೀಯಾ, ವಿಜಯೇಂದ್ರ ವಿರುದ್ಧ FIR!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com