
ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದು, ಓರ್ವ ನಕ್ಸಲೀಯನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಉಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ತುಮ್ರೆಲ್ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಘಟಕದ 210ನೇ ಬೆಟಾಲಿಯನ್ ಮತ್ತು ಛತ್ತೀಸ್‌ಗಢ ಪೊಲೀಸ್ ಡಿಆರ್‌ಜಿ ಮತ್ತು ಎಸ್‌ಟಿಎಫ್‌ನ ಪಡೆಗಳ ನೇತೃತ್ವದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಕೋಬ್ರಾ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲೀಯನನ್ನು ತಟಸ್ಥಗೊಳಿಸಲಾಗಿದೆ ಮತ್ತು ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಗಾಯಾಳುಗಳನ್ನು ಸ್ಥಳಾಂತರಿಸಲು ಐಎಎಫ್ ಹೆಲಿಕಾಪ್ಟರ್ ಅನ್ನು ಸೇವೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್(CoBRA) ಎಂಬುದು ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯ ವಿಶೇಷ ಅರಣ್ಯ ವಾರ್ ಘಟಕವಾಗಿದ್ದು, ಇದು ಎಡಪಂಥೀಯ ಉಗ್ರವಾದ ಪೀಡಿತ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
Advertisement