
ನವದೆಹಲಿ: ರಾಜಧಾನಿ ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ಪ್ರಬಲ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಮಾಹಿತಿ ಮೇರೆಗೆ, ಸೆಕ್ಟರ್ 2 ರಲ್ಲಿ 17 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಬೆಂಕಿಯ ಪರಿಣಾಮವಾಗಿ ಆವರಣದೊಳಗೆ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಡಿಎಫ್‌ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಮತ್ತು ಪ್ರದೇಶದ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು ಬೆಂಕಿಗೆ ಕಾರಣ ಮತ್ತು ನಂತರದ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Advertisement