
ಲತೇಹಾರ್(ಜಾರ್ಖಂಡ್): ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜಾರ್ಖಂಡ್ ಜನ ಮುಕ್ತಿ ಪರಿಷತ್ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ಜಂಟಿಯಾಗಿ ಲತೇಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಡೆಸಿದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಮಾವೋವಾದಿ ವಿಭಜನೆ ಗುಂಪಿನ ಜೆಜೆಎಂಪಿ ಮುಖ್ಯಸ್ಥ ಲೋಹ್ರಾ ಮತ್ತು ಅವರ ಸಹಚರರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ. ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಲಮು ಡಿಐಜಿ ವೈಎಸ್ ರಮೇಶ್ ತಿಳಿಸಿದ್ದಾರೆ.
ಪಪ್ಪು ಲೋಹ್ರಾ ಮತ್ತು ಇನ್ನೂ ಗುರುತು ಪತ್ತೆಯಾಗದ ಇನ್ನೊಬ್ಬ ವ್ಯಕ್ತಿಯ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿದ್ದ ಗುಂಪಿನ ಒಬ್ಬ ಮಾವೋವಾದಿಯನ್ನು ಬಂಧಿಸಲಾಗಿದ್ದು, ಅವರಿಂದ ಐಎನ್‌ಎಸ್‌ಎಎಸ್ ರೈಫಲ್ ನ್ನು ವಶಪಡಿಸಿಕೊಳ್ಳಲಾಗಿದೆ.
Advertisement