ಥಾಣೆಯಲ್ಲಿ ಕೊರೋನಾಗೆ 21 ವರ್ಷದ ಯುವಕ ಬಲಿ

ಮುಂಬ್ರಾದ 21 ವರ್ಷದ ಯುವಕನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಮೇ 22, 2025 ರಂದು ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಕಲ್ವಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಥಾಣೆ: ದೇಶದಲ್ಲಿ ಮಹಾಮಾರಿ ಕೊರೋನಾ ಮತ್ತೆ ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಕಲ್ವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ಕೋವಿಡ್-19 ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಥಾಣೆ ಮಹಾನಗರ ಪಾಲಿಕೆ ತಿಳಿಸಿದೆ.

ಮುಂಬ್ರಾದ 21 ವರ್ಷದ ಯುವಕನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಮೇ 22, 2025 ರಂದು ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಕಲ್ವಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ಬೆಂಗಳೂರಿನಲ್ಲಿ ಕೊರೋನಾಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 32 ಪಾಸಿಟಿವ್ ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ 38 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ!

ಮುಖ್ಯವಾಗಿ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ ಇತ್ಯಾದಿ ರಾಜ್ಯಗಳಲ್ಲಿ ವರದಿಯಾದ COVID-19 ಪ್ರಕರಣಗಳ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com