'ಭಯೋತ್ಪಾದನೆ ವಿರುದ್ಧ ಹೋರಾಟ ನಿಲ್ಲುವುದಿಲ್ಲ.. ನಾನು ಸರ್ಕಾರಕ್ಕಾಗಿ ಕೆಲಸ ಮಾಡುವುದಿಲ್ಲ.. ದೇಶಕ್ಕಾಗಿ.. ವಿಪಕ್ಷಕ್ಕಾಗಿ ಮಾಡುತ್ತೇನೆ': Shashi Tharoor

26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ನಿಖರ ಮತ್ತು ದೃಢವಾದ ಮಿಲಿಟರಿ ಪ್ರತಿಕ್ರಿಯೆ (ಆಪರೇಷನ್ ಸಿಂಧೂರ)ಯನ್ನು ಹಿರಿಯ ಕಾಂಗ್ರೆಸ್ ಸಂಸದ ಶಶಿ ತರೂರ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ನೀಡಿದ ಸಂದೇಶದಲ್ಲಿ ವಿವರಿಸಿದರು.
Shashi Tharoor
ಕಾಂಗ್ರೆಸ್ ಸಂಸದ ಶಶಿ ತರೂರ್online desk
Updated on

ನ್ಯೂಯಾರ್ಕ್: ಪಹಲ್ಗಾಮ್ ಉಗ್ರ ದಾಳಿ ನಂತರ ಕೇಂದ್ರ ಸರ್ಕಾರ ಕೈಗೊಂಡ 'ಆಪರೇಷನ್ ಸಿಂಧೂರ' ಅಡಿಯಲ್ಲಿ ಭಾರತೀಯ ಸೇನೆಯ ನಿಖರ ದಾಳಿಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಬೆಂಬಲಿಸಿದ್ದಾರೆ.

26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ನಿಖರ ಮತ್ತು ದೃಢವಾದ ಮಿಲಿಟರಿ ಪ್ರತಿಕ್ರಿಯೆ (ಆಪರೇಷನ್ ಸಿಂಧೂರ)ಯನ್ನು ಹಿರಿಯ ಕಾಂಗ್ರೆಸ್ ಸಂಸದ ಶಶಿ ತರೂರ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ನೀಡಿದ ಸಂದೇಶದಲ್ಲಿ ವಿವರಿಸಿದರು.. ಅಂತೆಯೇ ಪಾಕಿಸ್ತಾನವು ಈ ಪ್ರಕರಣದಲ್ಲಿ ಊಹಿಸಬಹುದಾದ ನಿರಾಕರಣೆ ಮತ್ತು ದಿಕ್ಕು ತಪ್ಪಿಸಿದೆ ಎಂದು ಆರೋಪಿಸಿದರು.

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಲ್ಲಿ ಸರ್ವಪಕ್ಷ ರಾಜತಾಂತ್ರಿಕ ಸಂಪರ್ಕದ ಸಂದರ್ಭದಲ್ಲಿ ಮಾತನಾಡಿದ ತರೂರ್, ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನ ಜಾಗತಿಕ ಕ್ರಮಕ್ಕೆ ಕರೆ ನೀಡಿದರು. ಅಂತೆಯೇ ಭಾರತದ ನಿರ್ಣಯಿತ ಪ್ರತೀಕಾರದ ತಂತ್ರವನ್ನು ಎತ್ತಿ ತೋರಿಸಿದರು.

'ನಾವು ಐದು ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದೇವೆ. ನಮ್ಮ ಪಯಣದ ಕೊನೆಯಲ್ಲಿ ಅಮೆರಿಕಕ್ಕೆ ಹಿಂತಿರುಗಲಿದ್ದೇವೆ. ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ನಿಲ್ಲುವುದು ಎಷ್ಟು ಮುಖ್ಯ ಎಂದು ಜಗತ್ತಿಗೆ ವಿವರಿಸಲು ಸಾಧ್ಯವಾಗಲಿದೆ ಎಂದು ನಾನು ಆಶಿಸುತ್ತೇನೆ. ಭಯೋತ್ಪಾದನೆ ವಿರುದ್ಧ ಹೋರಾಟ ನಿಲ್ಲುವುದಿಲ್ಲ. ಈ ಕೃತ್ಯ ಮುಂದುವರಿದರೆ ಸುಮ್ಮನೆ ಇರುವುದಿಲ್ಲ. ಇದು ಒಗಟ್ಟು ಪ್ರದರ್ಶಿಸುವ ಸಮಯ' ಎಂದು ಶಶಿ ತರೂರ್ ಹೇಳಿದರು.

'ಪಾಕ್ ಪ್ರಾಯೋಜಿತ ಭಯೋತ್ಪಾದನೆ ಅಂತ್ಯವಾಗಬೇಕು. ಈ ನಿಟ್ಟಿನಲ್ಲಿ ದೃಢಸಂಕಲ್ಪವನ್ನು ಹೊಂದಿದ್ದೇವೆ. ನಮ್ಮಿಂದಾಗುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಹಲವು ಬಾರಿ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ. ಆದರೆ ಪಾಕಿಸ್ತಾನ ನಿರಾಕರಿಸುತ್ತಲೇ ಬಂದಿದೆ. ಭಯೋತ್ಪಾದನೆಯನ್ನು ಪಾಕ್ ಪೋಷಿಸುತ್ತಲೇ ಬಂದಿದೆ. ಆದರೆ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಮೂಲಕ ಸ್ಪಷ್ಟ ಸಂದೇಶವನ್ನು ರವಾನಿಸಲಾಗಿದೆ. ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಬೇಕು. ಅವರನ್ನು ಸುಮ್ಮನೆ ಬಿಡುವುದಿಲ್ಲ. ಭಯೋತ್ಪಾದನೆಗೆ ಎಲ್ಲಿಂದ ತರಬೇತಿ, ಹಣಕಾಸಿನ ನೆರವು ಸಿಗುತ್ತಿದೆ ಎಂಬುದನ್ನು ನಾವು ಯೋಚಿಸಬೇಕು ಎಂದರು.

Shashi Tharoor
Bahrain: ಅಮಾಯಕರನ್ನು ಕೊಂದು, ಸಮರ್ಥನೆಗೆ ಧರ್ಮ ಬಳಸ್ತಾರೆ; ಪಾಕ್ ವಿರುದ್ಧ ಗುಡುಗಿದ ಅಸಾದುದ್ದೀನ್ ಓವೈಸಿ!

ಅಂತೆಯೇ 'ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ನಮಗೆ ಆಸಕ್ತಿ ಇಲ್ಲ. 21ನೇ ಶತಮಾನದಲ್ಲಿ ನಮ್ಮ ಆರ್ಥಿಕತೆಯನ್ನು ಬೆಳೆಸಲು, ಜನರ ಏಳಿಗೆಗಾಗಿ ಪ್ರಯತ್ನಿಸಲು ಇಚ್ಛೆಪಡುತ್ತೇವೆ. ಆದರೆ ಬೇಸರದ ಸಂಗತಿಯೆಂದರೆ ಪಾಕಿಸ್ತಾನ, ಭಾರತದ ಪ್ರದೇಶವನ್ನು ಅತಿಕ್ರಮಿಸಲು ಬಯಸುತ್ತದೆ. ಸಾಂಪ್ರದಾಯಿಕ ವಿಧಾನಗಳ ಮೂಲಕ ಪಡೆಯಲು ಸಾಧ್ಯವಾಗದಿದ್ದರೆ ಭಯೋತ್ಪಾದನೆ ಮೂಲಕ ಆಕ್ರಮಿಸಲು ಬಯಸುತ್ತಿದೆ. ಇದನ್ನು ಖಂಡಿತ ಒಪ್ಪಲು ಸಾಧ್ಯವಿಲ್ಲ. ನಿಮಗೆ ತಿಳಿದಿರುವಂತೆಯೇ ನಾನು ಸರ್ಕಾರವನ್ನು ಪ್ರತಿನಿಧಿಸುವುದಿಲ್ಲ. ವಿರೋಧ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಆದರೆ ಪಾಕ್ ವಿರುದ್ಧ ಭಾರತ ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ. ಒಂಬತ್ತು ಭಯೋತ್ಪಾದನೆ ನೆಲೆಗಳ ಮೇಲೆ ನಿರ್ದಿಷ್ಟ ಗುರಿಯ ದಾಳಿ ನಡೆಸಲಾಗಿದೆ ಎಂದು ಹೇಳಿದರು.

ಅಂದಹಾಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸಂಸದರ ನಿಯೋಗವು ಪಂಚ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದೆ. ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್‌ ಹಾಗೂ ಅಮೆರಿಕಕ್ಕೆ ಭೇಟಿ ನೀಡುತ್ತಿರುವ ಸರ್ವಪಕ್ಷ ನಿಯೋಗವನ್ನು ತರೂರ್‌ ಮುನ್ನಡೆಸುತ್ತಿದ್ದಾರೆ. ಮಾಜಿ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಈ ಗುಂಪಿನ ಭಾಗವಾಗಿದ್ದಾರೆ. ಈ ಸಂದರ್ಭದಲ್ಲಿ ನ್ಯೂಯಾರ್ಕ್‌ಗೆ ಬಂದಿಳಿದ ಬಳಿಕ ಕಾನ್ಸುಲೇಟ್‌ನಲ್ಲಿ ನಡೆದ ಸಂವಾದದಲ್ಲಿ ತರೂರ್ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com