
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಭಾನುವಾರ ಬೆಳಗ್ಗೆ ಭಾರಿ ಮಳೆಯಿಂದಾಗಿ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಅಂಕುರ್ ವಿಹಾರ್ ಲೋನಿ ಅವರ ಕಚೇರಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ 58 ವರ್ಷದ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಬ್ ಇನ್ಸ್‌ಪೆಕ್ಟರ್ ವೀರೇಂದ್ರ ಕುಮಾರ್ ಮಿಶ್ರಾ ಅವರು ಕೋಣೆಯೊಳಗೆ ಮಲಗಿದ್ದರು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವುದು ಕಂಡುಬಂದಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಪ್ರಿಯದರ್ಶಿ ಅವರು ಪೊಲೀಸ್ ಕಚೇರಿಯ ಮೇಲ್ಛಾವಣಿ ಕುಸಿದು ಬಿದ್ದಿರುವುದನ್ನು ಖಚಿತಪಡಿಸಿದ್ದಾರೆ.
ಮಿಶ್ರಾ ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಇಟಾವಾ ಜಿಲ್ಲೆಯ ಮಿಶ್ರಾ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement