
ನವದೆಹಲಿ: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸಿಆರ್‌ಪಿಎಫ್ ಯೋಧನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿ ಮೋತಿ ರಾಮ್ ಜಾಟ್ ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಮತ್ತು 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿವಿಧ ಮಾರ್ಗಗಳ ಮೂಲಕ ಅವರು ಪಿಐಒಗಳಿಂದ ಹಣ ಪಡೆದಿರುವುದನ್ನು ಎನ್ಐಎ ಪತ್ತೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಐಎ ದೆಹಲಿಯಲ್ಲಿ ಮೋತಿ ರಾಮ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನು ಜೂನ್ 6 ರವರೆಗೆ ತನ್ನ ಕಸ್ಟಡಿಗೆ ನೀಡಿದೆ ಎಂದು ಎನ್‌ಐಎ ತಿಳಿಸಿದೆ.
Advertisement