
ನವದೆಹಲಿ: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಇಂದು ನವದೆಹಲಿಯಲ್ಲಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಕುಟುಂಬ ಸದಸ್ಯರು ಸಂತೋಷ ವ್ಯಕ್ತಪಡಿಸಿದರು.
ಅನಂತ್ ನಾಗ್ ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲೂ ಸಕ್ರಿಯರಾಗಿದ್ದ ಅನಂತ್ ನಾಗ್ ಕರ್ನಾಟಕದಿಂದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಲಾ ರಂಗದಲ್ಲಿ ಅನಂತ್ ನಾಗ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.
Advertisement