ಹರ್ಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ: ಪಾರ್ಕ್ ಮಾಡಿದ್ದ ಕಾರಿನಲ್ಲಿ ಶವ ಪತ್ತೆ

ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು.
The vehicle where the incident involving the Mittal family took place in Panchkula
ಒಂದೇ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಕಾರು
Updated on

ಪಂಚಕುಲ(ಡೆಹ್ರಾಡೂನ್): ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್ ಮೂಲದ ಆರು ಮಂದಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಲಾಕ್ ಆಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮೂಲಗಳ ಪ್ರಕಾರ, ಕುಟುಂಬ ಸದಸ್ಯರು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ಕಠಿಣ ಕ್ರಮ ಕೈಗೊಂಡಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗಿದ ನಂತರ ಕಳೆದ ಭಾನುವಾರ ಈ ಘಟನೆ ನಡೆದಿದೆ.

ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.

The vehicle where the incident involving the Mittal family took place in Panchkula
ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಆರಂಭಿಕ ತನಿಖೆಯ ನಂತರ, ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.

ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com