ಥಾಣೆ: 72 ವರ್ಷದ ವೃದ್ಧೆಗೆ ಮದುವೆಯಾಗುವುದಾಗಿ ನಂಬಿಸಿ 57 ಲಕ್ಷ ರೂ ಪಡೆದು ವಂಚನೆ!

ಆ ವ್ಯಕ್ತಿ ಮಹಿಳೆಯ ವಿಶ್ವಾಸ ಗಳಿಸಿದ ನಂತರ, ಪುಣೆಯಲ್ಲಿ ಮದುವೆ ಮತ್ತು ಶಾಂತಿಯುತ ಜೀವನ ನಡೆಸುವ ಭರವಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಥಾಣೆ: ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ 73 ವರ್ಷದ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿ 57 ಲಕ್ಷ ರೂ.ಗಳಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪವಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಡೊಂಬಿವ್ಲಿ ಪ್ರದೇಶದ ನಾನಾ ಶಂಕರ್‌ಶೇತ್ ರಸ್ತೆಯಲ್ಲಿರುವ ವಸತಿ ಸೊಸೈಟಿಯ ನಿವಾಸಿಯಾಗಿರುವ ಸಂತ್ರಸ್ತೆ, ಪತ್ರಿಕೆಯಲ್ಲಿ ವೈವಾಹಿಕ ಜಾಹೀರಾತು ನೀಡಿದ್ದ 62 ವರ್ಷದ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ ಎಂದು ವಿಷ್ಣು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿವೇಕ್ ಕುಮುತ್ಕರ್ ಹೇಳಿದ್ದಾರೆ.

ಆ ವ್ಯಕ್ತಿ ಮಹಿಳೆಯ ವಿಶ್ವಾಸ ಗಳಿಸಿದ ನಂತರ, ಪುಣೆಯಲ್ಲಿ ಮದುವೆ ಮತ್ತು ಶಾಂತಿಯುತ ಜೀವನ ನಡೆಸುವ ಭರವಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಪುಣೆಯಲ್ಲಿ ಮನೆ ಖರೀದಿಸುವ ಉದ್ದೇಶ ಹೊಂದಿರುವುದಾಗಿ ಆ ವ್ಯಕ್ತಿ ಸಂತ್ರಸ್ತೆ ಮಹಿಳೆಗೆ ತಿಳಿಸಿದ್ದು, ಅದಕ್ಕಾಗಿ 35 ಲಕ್ಷ ರೂ.ಗಳನ್ನು ವರ್ಗಾಯಿಸುವಂತೆ ಮನವೊಲಿಸಿದ್ದಾರೆ. ಅಲ್ಲದೆ ಆಕೆಯನ್ನು ನಂಬಿಸಲು ನಕಲಿ ರಶೀದಿಗಳು ಮತ್ತು ನಕಲಿ ಆಸ್ತಿ ದಾಖಲೆಗಳನ್ನು ನೀಡಿದ್ದಾರೆ" ಎಂದು ಅಧಿಕಾರಿ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಮಹಿಳಾ ಪೇದೆಗೆ 18 ಲಕ್ಷ ರೂ ವಂಚನೆ

ತಾತ್ಕಾಲಿಕವಾಗಿ ಮಹಿಳೆಯ ಮನೆಯಲ್ಲಿ ವಾಸಿಸಿದ ನಂತರ, ಆರೋಪಿಯು ಆಕೆಯ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾನೆ ಎಂದು ಆರೋಪಿಸಲಾಗಿದೆ.

ಆಕೆಯ ಡೆಬಿಟ್ ಕಾರ್ಡ್ ಅನ್ನು ಸಹ ಕದ್ದು, ಅದನ್ನು ಬಳಸಿಕೊಂಡು 2.4 ಲಕ್ಷ ರೂ.ಗಳನ್ನು ಡ್ರಾ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು ಮಹಿಳೆಯಿಂದ ಹಣ ಪಡೆದು ವಂಚಿಸಿದ ನಂತರ, ಆರೋಪಿ ಕಣ್ಮರೆಯಾಗಿದ್ದು, ಇದುವರೆಗೆ ಪತ್ತೆಯಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಪೊಲೀಸರು ಸೋಮವಾರ ಆ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com