ಉತ್ತರ ಪ್ರದೇಶ: ಹಾಪುರದಲ್ಲಿ ಪೊಲೀಸರ ಎನ್ಕೌಂಟರ್; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್ ಹತ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು.
Updated on

ಲಖನೌ: ಉತ್ತರಪ್ರದೇಶದ ಹಾಪುರದಲ್ಲಿ ಪೊಲೀಸರು ಎನ್ಕೌಂಟರ್ ನಡೆಸಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿದ್ದಾರೆ.

ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎನ್ಕೌಂಟರ್ ನಡೆಸಲಾಗಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಕೊತ್ವಾಲಿಯಲ್ಲಿ ಬಿಷ್ಣೋಯ್ ಗ್ಯಾಂಗ್ ಇರುವ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಷ್ಣೋಯ್ ಗ್ಯಾಂಗ್ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದರು.

ಈ ವೇಳೆ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ, ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡಗಳು ಸೇರಿ ಈ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ನವೀನ್ ಮೇಲೆ ದೆಹಲಿಯ ಥಾನಾ ಫರ್ಶ್ ಬಜಾರ್‌ನಲ್ಲಿ ಕೊಲೆ, ದರೋಡೆ, ಅಪಹರಣ ಸೇರಿ 20ಕ್ಕೂ ಪ್ರಕರಣ ದಾಖಲಾಗಿದ್ದವು. ಈ ಹಿಂದೆ ದೆಹಲಿಯಲ್ಲಿ ಪ್ರಕರಣದಲ್ಲಿ ನವೀನ್ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ವರದಿಗಳು ತಿಳಿಸಿವೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು.
ಜೈಲಿನಲ್ಲಿ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ: ಕೆಲಸದಿಂದ ಡಿಎಸ್‌ಪಿ ವಜಾ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com