
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರಿಗೆ ಅಧಿಕಾರ ದೊರೆತ ದಿನವೇ ಪಾಕ್ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ತಿವಾರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಅವರು ಧೈರ್ಯಶಾಲಿ ಮತ್ತು ದೃಢನಿಶ್ಚಯದ ನಾಯಕ ಎಂದು ತಿವಾರಿ ಬಣ್ಣಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರದ ಬಗ್ಗೆ ಅವರ ಬದ್ಧತೆ ಗಮನಾರ್ಹವಾಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ಅವರ ಕೈಗೆ ಅಧಿಕಾರ ಹಾಗೂ ಭಾರತಕ್ಕಾಗಿ ನಿರ್ಧಾರಗಳನ್ನು ಕೈಗೊಳ್ಳುವ ಹಕ್ಕು ದೊರೆಯುವ ದಿನವೇ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ಅವರು ದೃಢ ನಿಶ್ಚಯ ಹೊಂದಿರುವ ವ್ಯಕ್ತಿಯಾಗಿರುವುದರಿಂದ ನನ್ನಲ್ಲಿ ಆ ನಂಬಿಕೆ ಇದೆ' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22ರಂದು ನಡೆಸಿದ ಗುಂಡಿನ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.
Advertisement