ಉತ್ತರಾಖಂಡ: ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ; ಓರ್ವ ಸಾವು, ಐವರಿಗೆ ಗಾಯ
ರುದ್ರಪ್ರಯಾಗ: ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಐವರಿಗೆ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಭಕ್ತರನ್ನು ಛತ್ತೀಸಗಢದಿಂದ ಕೇದಾರನಾಥ ದೇವಾಲಯಕ್ಕೆ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಭೂಕುಸಿತ ಹಿನ್ನೆಲೆಯಲ್ಲಿ ಗುಪ್ತಕಾಶಿಯ ಬಳಿಯ ಕುಂಡ್ ಬಳಿ ವಾಹನ ಸಿಲುಕಿ ದುರ್ಘಟನೆ ಸಂಭವಿಸಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದವು. ಇದೀಗ ಗಾಯಾಳುಗಳನ್ನು ಹೊರತೆಗೆದು ಹತ್ತಿರದ ಅಗಸ್ತಮುನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐವರ ಪೈಕಿ ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದರೆ, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಐವರೂ ಛತ್ತೀಸ್‌ಗಢದ ದುರ್ಗ್ ಜಿಲ್ಲೆಗೆ ಸೇರಿದವರು ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಮೃತ ವ್ಯಕ್ತಿಯನ್ನು ವಾಹನದ ಚಾಲಕನನ್ನು ತೆಹ್ರಿ ಗರ್ವಾಲ್ ಜಿಲ್ಲೆಯ ಲಂಬಗಾಂವ್ ನಿವಾಸಿ ರಾಜೇಶ್ ಸಿಂಗ್ ರಾವತ್ (38) ಎಂದು ಗುರುತಿಸಲಾಗಿದೆ.