ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು.
Andhra Pradesh Temple Stampede
ಕಾಶಿಬುಗ್ಗದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ
Updated on

ಶ್ರೀಕಾಕುಳಂ: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ವರದಿಯಾಗಿದ್ದು, ಆಂಧ್ರಪ್ರದೇಶದ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತದಲ್ಲಿ ಕನಿಷ್ಛ 10 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಕಾಲ್ತುಳಿತದಲ್ಲಿ ಅನೇಕ ಭಕ್ತರು ಗಂಭೀರವಾಗಿ ಗಾಯಗೊಂಡರು.

ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ, ದೇವಾಲಯದ ಸುತ್ತಮುತ್ತ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆ ನಡೆದ ದೇವಾಲಯಕ್ಕೆ ಪೊಲೀಸರು ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Andhra Pradesh Temple Stampede
ಕೇರಳದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ: NCBC ತೀವ್ರ ಆಕ್ರೋಶ!

ಘಟನೆಯ ಬಗ್ಗೆ ಜಿಲ್ಲಾ ಅಧಿಕಾರಿಗಳು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ದೇವಾಲಯದ ಭದ್ರತಾ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು. ಈ ಮಧ್ಯೆ, ಆನಮ್ ರಾಮನಾರಾಯಣ ರೆಡ್ಡಿ ಕಾಲ್ತುಳಿತ ಘಟನೆಯ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ.

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ನಾಯ್ಡು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸಿಎಂ ಹೇಳಿದ್ದಾರೆ.

ದೇಗುಲದ ಇತಿಹಾಸ

ಪಾಂಡ ಕುಟುಂಬವು ಹತ್ತು ವರ್ಷಗಳ ಹಿಂದೆ ತಿರುಮಲದಲ್ಲಿ ದರ್ಶನ ಪಡೆಯಲು ಸಾಧ್ಯವಾಗದ ಕಾರಣ, 12 ಎಕರೆ ಭೂಮಿಯಲ್ಲಿ ಈ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಸ್ವಂತವಾಗಿ ನಿರ್ಮಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com