

ತಿನ್ಸುಕಿಯಾ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಬೋರ್ಡುಬಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬಾಲಕಿಯ ಹೇಳಿಕೆಯ ಪ್ರಕಾರ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ರಸ್ತೆಬದಿಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆಯ ಕುಟುಂಬದವರ ಪ್ರಕಾರ, 7ನೇ ತರಗತಿಯ ವಿದ್ಯಾರ್ಥಿನಿ ಶಾಲೆ ಮುಗಿದ ನಂತರ ಮನೆಗೆ ಹಿಂತಿರುಗಲಿಲ್ಲ. ಮಧ್ಯಾಹ್ನ 2.30 ಕ್ಕೆ ಶಾಲೆ ಮುಗಿದರೂ ಬಾಲಕಿ ಸಂಜೆಯಾದರೂ ಮನೆಗೆ ಬಂದಿರಲಿಲ್ಲ.
ಸಂಜೆ 5 ಗಂಟೆ ಸುಮಾರಿಗೆ, ಇ-ರಿಕ್ಷಾ ಚಾಲಕನೊಬ್ಬ ಚಹಾ ತೋಟದ ಬಳಿ ರಸ್ತೆಬದಿಯಲ್ಲಿ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಬಿದ್ದಿರುವುದನ್ನು ನೋಡಿರುವುದಾಗಿ ಕುಟುಂಬಕ್ಕೆ ಮಾಹಿತಿ ನೀಡಿದ್ದಾನೆ. ಅವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಗಾಯಗಳು ಮತ್ತು ಬಟ್ಟೆ ಹರಿದ ಸ್ಥಿತಿಯಲ್ಲಿರುವುದು ಗಮನಿಸಿದ್ದಾರೆ" ಎಂದು ಅಧಿಕಾರಿ ಹೇಳಿದ್ದಾರೆ.
ತಕ್ಷಣ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ ಮತ್ತು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾವು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ಈ ಮಧ್ಯೆ, ಅಪರಾಧಿಗಳನ್ನು ಬಂಧಿಸಲು ನಾವು ಹುಡುಕಾಟ ಆರಂಭಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಈ ಘಟನೆಯು ಜನರಲ್ಲಿ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದ್ದು, ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ತಿನ್ಸುಕಿಯಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಬಾಲಕಿಯ ಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
Advertisement