

ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದರಿಂದ ಕಾಲೇಜು ವಿದ್ಯಾರ್ಥಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಧಾನಾ ಪಟ್ಟಣದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧಾನಾದಲ್ಲಿರುವ ಡಿಎವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ. ಇದರಿಂದ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೇಕಡಾ 70 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಉಜ್ವಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement