Kerala local body election to be held in two phases on December 9 and 11, counting of votes on Dec 13
ರಾಜ್ಯ ಚುನಾವಣಾ ಆಯುಕ್ತ ಎ. ಶಾಜಹಾನ್

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ; ಡಿ.13ಕ್ಕೆ ಫಲಿತಾಂಶ

ಇಂದು ಪತ್ರಿಕಾಗೋಷ್ಠಿಯಲ್ಲಿ ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯ ದಿನಾಂಕ ಪ್ರಕಟಿಸಿದ ಶಾಜಹಾನ್ ಅವರು, ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
Published on

ತಿರುವನಂತಪುರಂ: ಕೇರಳದ ಸ್ಥಳೀಯ ಸ್ವ-ಆಡಳಿತ ಸಂಸ್ಥೆಗಳಿಗೆ ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಎ. ಶಾಜಹಾನ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯ ದಿನಾಂಕ ಪ್ರಕಟಿಸಿದ ಶಾಜಹಾನ್ ಅವರು, ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿದ್ದು, ನವೆಂಬರ್ 22 ರಂದು ಪರಿಶೀಲನೆಗೆ ನಡೆಸಲಾಗುವುದು ಮತ್ತು ನವೆಂಬರ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Kerala local body election to be held in two phases on December 9 and 11, counting of votes on Dec 13
ಸಂಶೋಧನಾ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಆರೋಪ: ಕೇರಳ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥ ವಿರುದ್ಧ FIR!

ಡಿಸೆಂಬರ್ 9 ರಂದು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಎರ್ನಾಕುಲಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ತ್ರಿಶೂರ್, ಪಾಲಕ್ಕಾಡ್, ವಯನಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಡಿಸೆಂಬರ್ 11 ರಂದು ಮತದಾನ ನಡೆಯಲಿದೆ.

1,199 ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 23,576 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 13 ರಂದು ಮತ ಎಣಿಕೆ ನಡೆಯಲಿದ್ದು, ಡಿಸೆಂಬರ್ 18 ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯು ಮುಕ್ತಾಯಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com