

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರಿನಲ್ಲಿ ಸ್ಫೋಟ ಸಂಭವಿಸಿ 11 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹಲವಾರು ವಾಹನಗಳು ಸುಟ್ಟು ಭಸ್ಮವಾದ ಸ್ಥಳದ ಬಳಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಮಹತ್ವದ ಸುಳಿವು ದೊರೆತಿದೆ. ಈ ಸುಳಿವಿನಿಂದ ಘಟನೆಗೆ ಸಂಬಂಧಿಸಿದ ತನಿಖೆಯ ಆಯಾಮವೇ ಬದಲಾವಣೆಯಾಗುವ ಸಾಧ್ಯತೆ ಇದೆ.
ಘಟನಾ ಸ್ಥಳದಲ್ಲಿ ನೆಲದ ಮೇಲೆ ಜೀವಂತ ಗುಂಡು ಪತ್ತೆಯಾಗಿರುವುದು, ತನಿಖೆಗೆಯ ದಿಕ್ಕನ್ನು ಬದಲಿಸಿದೆ. ಘಟನೆಯ ಹಿಂದೆ ಭಯೋತ್ಪಾದಕರ ಕೃತ್ಯ ಇದೆ ಎಂದು ಶಂಕಿಸಲಾಗುತ್ತಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಪ್ರಕರಣದ ಸಂಬಂಧ ಓರ್ವ ಶಂಕಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
"ನಾವು ತಕ್ಷಣ ಪ್ರತಿಕ್ರಿಯಿಸಿದೆವು ಮತ್ತು ಏಳು ತುಕಡಿಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಂಜೆ 7:29 ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು" ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎ.ಕೆ. ಮಲಿಕ್ ಹೇಳಿದ್ದಾರೆ. ಸ್ಫೋಟದ ನಂತರ, ಪ್ರವಾಸಿ ದಟ್ಟಣೆಯನ್ನು ಹೊಂದಿರುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Advertisement