

ಲಖನೌ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯ ಅಪಾಯಕಾರಿ ದುಸ್ಸಾಹಸದ ವಿಡಿಯೋವೊಂದು ವೈರಲ್ ಆಗಿದೆ.
ಲಖನೌನ ಶಹೀದ್ ಪಾತ್‌ನಲ್ಲಿ ಈ ಘಟನೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಅಜಾಗರೂಕ ವರ್ತನೆ ಬಗ್ಗೆ ತೀವ್ರ ಕಳವಳವನ್ನುಂಟು ಮಾಡಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವೈರಲ್ ಆಗಿರುವ ಈ ವೀಡಿಯೊದಲ್ಲಿ, ಉತ್ತರ ಪ್ರದೇಶದ ನೋಂದಣಿ ಹೊಂದಿರುವ ಕಪ್ಪು ಬಣ್ಣದ ಕಾರಿನ ಕಿಟಕಿಯ ಅಂಚಿನಲ್ಲಿ ಬಟ್ಟೆ ಧರಿಸದೆ ಆಕ್ಷೇಪಾರ್ಹ ಕೃತ್ಯ ಮಾಡುತ್ತಾ ನೇತಾಡುತ್ತಿರುವ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದಾಳೆ.
'ಉಪ್ಕಬರ್' ಎಂಬ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ನಾಚಿಕೆಗೇಡಿನ ವಿಡಿಯೋ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ದಾರಿಹೋಕರು ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.
ವಿಡಿಯೋ ವೈರಲ್ ಆದ ಬಳಿಕ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಘಟನೆ ಕುರಿತು ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
Advertisement