

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರು ಛಿದ್ರಗೊಂಡು ಹಲವಾರು ವಾಹನಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಮತ್ತು ಇದು ಉಗ್ರರ ಕೃತ್ಯ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Advertisement