ನವದೆಹಲಿ: ಶುದ್ಧ ಗಾಳಿಗಾಗಿ ಒತ್ತಾಯ, ಪ್ರತಿಭಟನಾಕಾರರ ಬಂಧನ, ನಾಗರಿಕರನ್ನು ಅಪರಾಧಿಗಳಂತೆ ನೋಡಲಾಗುತ್ತಿದೆ: ರಾಹುಲ್ ಕಿಡಿ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ ಬಗ್ಗೆ ಪ್ರತಿಭಟನೆ ನಡೆಸಿದವರನ್ನು ಬಂಧಿಸಿದ್ದಕ್ಕಾಗಿ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಶುದ್ಧ ಗಾಳಿಗಾಗಿ ಒತ್ತಾಯಿಸಿ ಶಾಂತಿಯುತವಾಗಿ ಒತ್ತಾಯಿಸುತ್ತಿರುವ ನಾಗರಿಕರನ್ನು ಯಾಕೆ ಅಪರಾಧಿಗಳಂತೆ ನೋಡಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಶುದ್ಧ ಗಾಳಿಗಾಗಿ ಇಂಡಿಯಾ ಗೇಟ್ ನಲ್ಲಿ ಪ್ರತಿಭಟಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಕರೆದುಕೊಂಡು ಹೋಗಿ ಬಸ್ ಹತ್ತಿಸಿದರು ಎಂದು ಪರಿಸರವಾದಿ ವಿಮಲೇಂದು ಝಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಶುದ್ಧ ಗಾಳಿಗಾಗಿ ಶಾಂತಿಯುತವಾಗಿ ಬೇಡಿಕೆ ಇಟ್ಟಿದ್ದ ನಾಗರಿಕರನ್ನು ಅಪರಾಧಿಗಳಂತೆ ಯಾಕೆ ನೋಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಶುದ್ಧ ಗಾಳಿಯು ಮನುಷ್ಯನ ಮೂಲಭೂತ ಹಕ್ಕು ಆಗಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನವು ಖಾತ್ರಿಪಡಿಸುತ್ತದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.


