

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಗುರುವಾರ ಸಂಜೆ ಕಂಟೇನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಡಿಕ್ಕಿಯ ನಂತರ ಕೆಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ವರದಿಗಳು ತಿಳಿಸಿವೆ.
ಪುಣೆ ನಗರದ ಹೊರವಲಯದಲ್ಲಿರುವ ಮುಂಬೈ-ಬೆಂಗಳೂರು ಹೆದ್ದಾರಿಯ ಸೇತುವೆಯ ಮೇಲೆ ಬೆಂಕಿ ಹೊತ್ತಿಕೊಂಡಿದ್ದು, ಎರಡು ದೊಡ್ಡ ಕಂಟೇನರ್ ಟ್ರಕ್‌ಗಳ ನಡುವೆ ಕಾರೊಂದು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇಂದು ಸಂಜೆ ನವಲೆ ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಎಂಟರಿಂದ ಹತ್ತು ಜನ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
"ಅಪಘಾತ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಪ್ರಸ್ತುತ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ತಕ್ಷಣ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆಯಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.
ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅವರು ತಿಳಿಸಿದ್ದಾರೆ.
ಒಂದು ಟ್ರಕ್‌ನ ಬ್ರೇಕ್ ಫೇಲ್ ಆದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Advertisement