

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳ ಪೈಕಿ 202 ಕ್ಷೇತ್ರಗಳ್ಲಲಿ NDA ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದ್ದರೇ ಮಹಾಘಟಬಂಧನ್ ನೆಲಕ್ಕಚ್ಚಿದೆ. ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯಾಗಿದ್ದು 33 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಗೆಲುವು ಖಚಿತವಾಗುತ್ತಿದ್ದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಕರ್ನಾಟಕದಲ್ಲಿಯೂ ಮುಂದೆ ಇದೇ ರೀತಿ ಫಲಿತಾಂಶ ಹೊರಬೀಳಲಿದೆ ಎಂದಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಿಹಾರ ಚುನಾವಣೆಯ ಇಂದಿನ ಫಲಿತಾಂಶ 2028ರಲ್ಲಿ ರಾಜ್ಯದಲ್ಲಿ ಮರುಕಳಿಸಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮುಂದಿನ ಗೆಲುವಿಗೆ ಬುನಾದಿ ಹಾಕಿದೆ ಎಂದು ಹೇಳಿದರು. ಬಿಹಾರದಲ್ಲಿ ಎನ್ ಡಿಎಗೆ ಸಿಕ್ಕ ಗೆಲುವು ಬಿಜೆಪಿಯಲ್ಲಿ ಉತ್ಸಾಹ ಹೆಚ್ಚಿಸಿದೆ ಎಂದರು. ಬಿಹಾರದಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳು ಕಳೆದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಈಗಲೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
Advertisement