

ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ನಾಯಕ ಮತ್ತು ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಪ್ರಸಾದ್ ಯಾದವ್ ಅವರು ನವೆಂಬರ್ 18 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದು, ಎಕ್ಸಿಟ್ ಪೋಲ್ ಗಳನ್ನು ತಳ್ಳಿಹಾಕಿದ್ದಾರೆ. ಮಹಾಘಟಬಂಧನ ಖಂಡಿತವಾಗಿಯೂ ಅಧಿಕಾರಕ್ಕೆ ಬರುತ್ತದೆ, ತಾವು ನವೆಂಬರ್ 18ಕ್ಕೆ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಮತ ಎಣಿಕೆಗೆ ಮುನ್ನ ಬರೆದುಕೊಂಡಿದ್ದಾರೆ.
ಮಂಗಳವಾರ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ಮತ ಚಲಾಯಿಸುತ್ತಿದ್ದಾಗ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಹರಿದಾಡುತ್ತಿದ್ದವು ಎಂದು ತೇಜಸ್ವಿ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.
ಅಧಿಕಾರಿಗಳ ಮೇಲೆ ಮಾನಸಿಕ ಒತ್ತಡ ಹೇರುವ ಉದ್ದೇಶವಿತ್ತು, ಮತ ಎಣಿಕೆ ನಿಧಾನವಾಗುವುದನ್ನು ಸಹ ಇದು ಸ್ಪಷ್ಟವಾಗಿ ತೋರಿಸಿದೆ ಎಂದು ಅವರು ಹೇಳಿದ್ದಾರೆ.
ಬಿಹಾರದಲ್ಲಿ ಇಂದಿನ ಪರಿಸ್ಥಿತಿ 1995 ರಂತೆಯೇ ಇದೆ ಎಂದು ಹೇಳಿರುವ ತೇಜಸ್ವಿ ಯಾದವ್ , ಈ ಬಾರಿ ಬದಲಾವಣೆ ಖಚಿತ ಎಂದು ಹೇಳಿದರು, ಪಕ್ಷವು ತಳಮಟ್ಟದಿಂದ ಪ್ರೋತ್ಸಾಹದಾಯಕ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಎಂದು ಹೇಳಿದರು.
Advertisement