

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ ಪ್ರದೇಶಗಳ ನಡುವಿನ ಅರಣ್ಯ ಬೆಟ್ಟಗಳಲ್ಲಿ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಸಿಕ್ಕಿ ಜಿಲ್ಲಾ ಮೀಸಲು ಪಡೆ (DRG) ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇಲ್ಲಿಯವರೆಗೆ, ಮೂವರು ನಕ್ಸಲೀಯರು ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಹೇಳಿದರು.
ಈ ವರ್ಷ ಛತ್ತೀಸ್‌ಗಢದಲ್ಲಿ 262 ನಕ್ಸಲೀಯರು ಮೃತಪಟ್ಟಿದ್ದಾರೆ. ಅವರಲ್ಲಿ, ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 233 ಜನರು ಹತರಾಗಿದ್ದಾರೆ. ರಾಯ್‌ಪುರ ವಿಭಾಗದ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರು ಮೃತಪಟ್ಟಿದ್ದಾರೆ.
ದುರ್ಗ್ ವಿಭಾಗದ ಮೊಹ್ಲಾ-ಮನ್‌ಪುರ್-ಅಂಬಾಘರ್ ಚೌಕಿ ಜಿಲ್ಲೆಯಲ್ಲಿಯೂ ಇಬ್ಬರು ನಕ್ಸಲೀಯರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
Advertisement