

ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 42 ಮಂದಿ ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮದೀನಾದಲ್ಲಿ ಸಂಭವಿಸಿರುವ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜಿದ್ದಾದ ರಾಯಭಾರಿ ಕಚೇರಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆಂದು ತಿಳಿಸಿದ್ದಾರೆ.
ಬಸ್ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ದುರ್ಘಟವೆ ವೇಳೆ ಬಸ್ ನಲ್ಲಿ ಒಟ್ಟು ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 43 ಮಂದಿ ಇದ್ದರು ಎನ್ನಲಾಗಿದ್ದು, 42 ಮಂದಿ ಸಜೀವ ದಹನವಗಿದ್ದರೆ, ಓರ್ವ ವ್ಯಕ್ತಿ ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement