ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದೇ ನಮ್ಮ ಬದ್ಧತೆ..
Amit Shah
ಅಮಿತ್ ಶಾ
Updated on

ನವದೆಹಲಿ: ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದೇ ನಮ್ಮ ಬದ್ಧತೆಯಾಗಿದೆ ಎಂದರು.

ಹರಿಯಾಣದ ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ 32ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಮಿತ್ ಶಾ ಅವರು, ದೆಹಲಿ ಸ್ಫೋಟ ಮತ್ತು ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶಾ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವು ಬಲಿಷ್ಠ ರಾಜ್ಯಗಳು ಬಲಿಷ್ಠ ರಾಷ್ಟ್ರವನ್ನು ಸೃಷ್ಟಿಸುವುದು ಎಂದು ಶಾ ಹೇಳಿದರು. ಈ ದೃಷ್ಟಿಕೋನವನ್ನು ಕಾರ್ಯಗತಗೊಳಿಸುವಲ್ಲಿ ಪ್ರಾದೇಶಿಕ ಮಂಡಳಿಗಳು ನಿರ್ಣಾಯಕವಾಗಿವೆ. ಪ್ರಾದೇಶಿಕ ಮಂಡಳಿಗಳು ಸಂವಾದ, ಸಹಕಾರ, ಸಮನ್ವಯ ಮತ್ತು ನೀತಿ ಸಿನರ್ಜಿಗೆ ನಿರ್ಣಾಯಕವಾಗಿವೆ ಎಂದರು.

ಮಂಡಳಿಗಳ ಮೂಲಕ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ದೇಶವು ಇನ್ನೂ ಪರಿಹರಿಸಬೇಕಾದ ಹಲವು ಸಮಸ್ಯೆಗಳಿವೆ. ಉದಾಹರಣೆಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ತ್ವರಿತ ಶಿಕ್ಷೆ ವಿಳಂಬ, ಅಪೌಷ್ಟಿಕತೆ ಮತ್ತು ಬೆಳವಣಿಗೆಯ ಕುಂಠಿತ. ಪೋಕ್ಸೋ ಕಾಯ್ದೆಯಡಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳ ತ್ವರಿತ ತನಿಖೆಯ ಅಗತ್ಯವನ್ನು ಶಾ ಒತ್ತಿ ಹೇಳಿದರು.

Amit Shah
Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಯಾವುದೇ ನಾಗರಿಕ ಸಮಾಜವು ಇಂತಹ ಘೋರ ಅಪರಾಧಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ತ್ವರಿತಗತಿಯ ವಿಶೇಷ ನ್ಯಾಯಾಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com