

ತಿರುವನಂತಪುರ: ಶಬರಿಮಲೆ ದೇವಸ್ಥಾನ ತೆರೆದ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್ ನ ಕೊಯಿಲಾಂಡಿ ಮೂಲದ 58 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು ದೇವರ ದರ್ಶನಕ್ಕಾಗಿ ಹತ್ತು ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತಿದ್ದರು. ಇನ್ನು 18 ಮೆಟ್ಟಿಲುಗಳ ಮುಂಭಾಗದಲ್ಲಿ ಸಣ್ಣ ಪ್ರದೇಶದಲ್ಲಿ ಭಕ್ತರು ಕಿಕ್ಕಿರಿದು ತುಂಬಿದ್ದರಿಂದ ನೂಕುನುಗ್ಗಲು ಉಂಟಾಗಿದ್ದು ಮಹಿಳೆ ಮೃತಪಟ್ಟಿದ್ದಾರೆ.
Advertisement