

ಕೊಂಡಗಾಂವ್: ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -30 ರಲ್ಲಿ, SUV ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಮಸೋರಾ ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರು ಕೊಂಡಗಾಂವ್‌ನಲ್ಲಿ ಸಿನಿಮಾ ವೀಕ್ಷಿಸಿ ಬಡೆ ಡೊಂಗರ್-ಭೈನ್ಸೆಬೆಡಾಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
12 ಜನರಿದ್ದ ಸ್ಕಾರ್ಪಿಯೋ ಎಸ್‌ಯುವಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೃತರನ್ನು ಲಖನ್ ಮದವಿ, ಭೂಪೇಂದ್ರ ಮದವಿ, ರೂಪೇಶ್ ಮದವಿ, ನೂತನ್ ಮಂಝಿ ಮತ್ತು ಶತ್ರುಘ್ನ ಮಂಝಿ ಎಂದು ಗುರುತಿಸಲಾಗಿದೆ. ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಾಳುಗಳಲ್ಲಿ ಕೆಲವರನ್ನು ಚಿಕಿತ್ಸೆಗಾಗಿ ಜಗದಲ್‌ಪುರಕ್ಕೆ ಕಳುಹಿಸಲಾಗಿದೆ. ಈ ಭೀಕರ ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement