

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಬುಧವಾರ ಮತ್ತೆ ವಾಗ್ದಾಳಿ ನಡೆಸಿದ್ದು, 'ಇದು 60ನೇ ಬಾರಿ' ಎಂದು ಟೀಕಿಸಿದೆ.
ಮಂಗಳವಾರ ಸೌದಿ ಕ್ರೌನ್ ಪ್ರಿನ್ಸ್ ಜೊತೆಗಿನ ದ್ವಿಪಕ್ಷೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಮತ್ತೆ ಹೇಳಿದರು.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ಹೇಳಿಕೆ ಮರೆತು ಹೋಗಿದೆ ಎಂದು ಅನಿಸಿದಾಗ, ಅಧ್ಯಕ್ಷ ಟ್ರಂಪ್ ಮತ್ತೆ ಜಗತ್ತಿಗೆ ನೆನಪಿಸಿದ್ದಾರೆ" ಎಂದು ಹೇಳಿದರು.
ನಿನ್ನೆ ವಾಷಿಂಗ್ಟನ್‌ನಲ್ಲಿ ಸೌದಿ ಕ್ರೌನ್ ಪ್ರಿನ್ಸ್ ಜೊತೆ ನಡೆದ ಸಭೆಯಲ್ಲಿ, ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸಲು ನಾನು ಮಧ್ಯಪ್ರವೇಶಿಸಿದೆ ಎಂದು ಟ್ರಂಪ್ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದರು ಎಂದು ರಮೇಶ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಖಂಡಿತ, ಅವರು ಇದನ್ನು ಸೌದಿ ಅರೇಬಿಯಾದಲ್ಲಿ ಮಾತ್ರವಲ್ಲದೆ ಕತಾರ್, ಈಜಿಪ್ಟ್, ಯುಕೆ, ನೆದರ್ಲ್ಯಾಂಡ್ಸ್ ಮತ್ತು ಜಪಾನ್‌ನಲ್ಲಿಯೂ ಸಹ ಇತರ ಹಲವು ಪತ್ರಿಕಾ ಸಂವಾದಗಳಲ್ಲಿ ಹೇಳಿದ್ದಾರೆ" ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
"ಟ್ರಂಪ್ ಹೇಳಿಕೆ ಸಂಖ್ಯೆ ಈಗ 60 ಆಗಿದೆ" ಎಂದು ಕಾಂಗ್ರೆಸ್ ನಾಯಕ ವ್ಯಂಗ್ಯವಾಡಿದ್ದಾರೆ.
Advertisement