

ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ತಮಿಳುನಾಡು ಭೇಟಿಯ ಸಂದರ್ಭದಲ್ಲಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆ ಇದೀಗ ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿದೆ. ಇದಲ್ಲದೆ, ನಾಯಕನ ಬೆದರಿಕೆ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ರಾಜಕೀಯ ವಲಯಗಳಿಗೆ ಹೊಸ ತಿರುವು ನೀಡಿದೆ.
ತೆಂಕಸಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಡಿಎಂಕೆ ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಜಯಪಾಲನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆತ ಪ್ರಧಾನಿ ಮೋದಿಯನ್ನು ನರಕಾಸುರನಿಗೆ ಹೋಲಿಸಿದ್ದಾನೆ. ಮೋದಿ ನಿಮ್ಮ ಮತಗಳನ್ನು ಕದಿಯಲು ಹತಾಶರಾಗಿದ್ದಾರೆ. ಅವರು ಮತ್ತೊಬ್ಬ 'ನರಕಾಸುರ'. ತಮಿಳುನಾಡಿಗೆ ಪ್ರಧಾನಿ ಮೋದಿಯಿಂದ ಪ್ರಯೋಜನ ಇಲ್ಲ. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಹೋರಾಡಿ ಗೆಲ್ಲಬೇಕು ಎಂದು ಹೇಳಿದ್ದಾನೆ.
ಡಿಎಂಕೆ ನಾಯಕನ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ
ಡಿಎಂಕೆ ನಾಯಕನ ವಿವಾದಾತ್ಮಕ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ದಾಳಿ ನಡೆಸಲು ಪ್ರೇರೇಪಿಸಿದೆ. ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ನಾಯನಾರ್ ನಾಗೇಂದ್ರನ್ ಅವರು ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಡಿಎಂಕೆ ನಾಯಕನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.
ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದಿಂದ ತಮಿಳುನಾಡಿಗೆ ತೆರಳಿದ್ದಾರೆ. ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಸತ್ಯಸಾಯಿ ಬಾಬಾ ಅವರ ಪವಿತ್ರ ದೇವಾಲಯಕ್ಕೆ ಭೇಟಿ ನೀಡಿದ ನಂತರ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿದರು. ಅಲ್ಲಿ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆಯನ್ನು ಉದ್ಘಾಟಿಸಿದ ಮೋದಿ, PM-KISAN ಯೋಜನೆಯ 21ನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ವರ್ಗಾಹಿಸಿದರು.
Advertisement