

ಥಾಣೆ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯಲ್ಲಿ ಅಸಮಾಧಾನದ ಹೊಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿರುಕು ಉಂಟಾಗಿದೆ.
ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಕ್ಷೇತ್ರವಾದ ಥಾಣೆಯಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೊರೇಟರ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ರಾತ್ರಿ ಥಾಣೆಯ ಪಚ್ಪಖಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಗರದ ಬಡವರಿಗೆ ಮೂಲ ಸೇವೆಗಳು(BSUP) (ಯೋಜನೆಯಡಿ ಮನೆಗಳ ನೋಂದಣಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರಕ್ಕೆ ಕ್ರೆಡಿಟ್ ತೆಗೆದುಕೊಳ್ಳುತ್ತಾ ಶಿವಸೇನೆಯ ಕೆಲವು ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಘರ್ಷಣೆ ನಡೆದಿದೆ ಎನ್ನಲಾಗಿದೆ.
Advertisement