ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಕ್ಟೋಬರ್ 30 ರಂದು ನೇಮಕ ಮಾಡಲಾಯಿತು ಮತ್ತು ಅವರು ಸುಮಾರು 15 ತಿಂಗಳು ಈ ಹುದ್ದೆಯಲ್ಲಿ ಇರುತ್ತಾರೆ. ಅವರಿಗೆ ಫೆಬ್ರುವರಿ 9, 2027ರಂದು 65 ವರ್ಷ ತುಂಬುವ ಹಿನ್ನೆಲೆಯಲ್ಲಿ ಅಧಿಕಾರದಿಂದ ನಿವೃತ್ತರಾಗುತ್ತಾರೆ.
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.
Advertisement