

ನವದೆಹಲಿ: ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾ ಅಧಿಕಾರಿಯ ವಜಾಗೊಳಿಸುವಿಕೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಸೈನ್ಯವು ಒಂದು ಸಂಸ್ಥೆಯಾಗಿ ಜಾತ್ಯತೀತವಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದೆ.
ಗುರುದ್ವಾರ ಪ್ರವೇಶಿಸಲು ಒತ್ತಾಯಿಸುವುದು ಅವರ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂಬ ವಾದವನ್ನು ಮುಂದಿಟ್ಟುಕೊಂಡು ಅಧಿಕಾರಿ ಅಮಾನತು ಕ್ರಮವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ಅವರ ನಡವಳಿಕೆಯು ಕಾನೂನುಬದ್ಧ ಆದೇಶದ ಅವಿಧೇಯತೆಗೆ ಸಮನಾಗಿರುತ್ತದೆ ಎಂದು ತೀರ್ಪು ನೀಡಿತು.
ಅವರು ಯಾವ ರೀತಿಯ ಸಂದೇಶವನ್ನು ರವಾನಿಸುತ್ತಿದ್ದಾರೆ? ಸೇನಾ ಅಧಿಕಾರಿಯೊಬ್ಬರು ಅಶಿಸ್ತು ತೋರಿಸುತ್ತಿದ್ದಾರೆ. ಅವರನ್ನು ವಜಾಗೊಳಿಸಬೇಕಿತ್ತು. ಈ ರೀತಿಯ ಹಿಂಸಾತ್ಮಕ ವ್ಯಕ್ತಿಗಳು ಮಿಲಿಟರಿಯಲ್ಲಿರಲು ಅರ್ಹರೇ?" ಎಂದು ನೂತನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ಸ್ಯಾಮ್ಯುಯೆಲ್ ಕಮಲೇಶನ್ ಅವರ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಹೇಳಿತು.
ಅವರು ಅತ್ಯುತ್ತಮ ಅಧಿಕಾರಿಯಾಗಿರಬಹುದು ಆದರೆ ಅವರು ಭಾರತೀಯ ಸೈನ್ಯಕ್ಕೆ ಸೂಕ್ತವಲ್ಲ. ಈ ಸಮಯದಲ್ಲಿ ನಮ್ಮ ಪಡೆಗಳು ಹೊಂದಿರುವ ಜವಾಬ್ದಾರಿಗಳ ಪ್ರಮಾಣ... ಇದು ನಾವು ನಿರ್ವಹಿಸಲು ಬಯಸುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.
3 ನೇ ಕ್ಯಾವಲ್ರಿ ರೆಜಿಮೆಂಟ್‌ನಲ್ಲಿ ಈ ಹಿಂದೆ ಲೆಫ್ಟಿನೆಂಟ್ ಆಗಿದ್ದ ಕಮಲೇಶನ್ ಅವರನ್ನು ಮಿಲಿಟರಿ ಶಿಸ್ತನ್ನು ಧಿಕ್ಕರಿಸಿದ್ದಕ್ಕಾಗಿ ವಜಾಗೊಳಿಸಲಾಗಿದೆ. ಪೂಜೆ ನಡೆಸಲು ದೇವಾಲಯದ ಗರ್ಭಗುಡಿ ಪ್ರವೇಶಿಸಲು ಅವರು ತಮ್ಮ ಉನ್ನತ ಅಧಿಕಾರಿಯ ಆದೇಶವನ್ನು ನಿರಾಕರಿಸಿದ್ದರು. ಇದು ಅವರ ಏಕದೇವತಾವಾದಿ ಕ್ರಿಶ್ಚಿಯನ್ ನಂಬಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದರು.
ಮೇ ತಿಂಗಳಲ್ಲಿ ದೆಹಲಿ ಹೈಕೋರ್ಟ್ ಕಮಲೇಶನ್ "ತನ್ನ ಮೇಲಧಿಕಾರಿಯ ಕಾನೂನುಬದ್ಧ ಆದೇಶಕ್ಕೆ ಕ್ಯಾರೆ ಎನ್ನದೇ ತನ್ನ ಧರ್ಮವನ್ನು ಉಳಿಸಿಕೊಂಡಿದ್ದಾರೆ ಎಂಬ ಸೇನೆಯ ನಿರ್ಧಾರವನ್ನು ಮರು ದೃಢಪಡಿಸಿತ್ತು. ಇದು ಸ್ಪಷ್ಟವಾಗಿ ಅಶಿಸ್ತಿನ ಕೃತ್ಯ ಎಂದು ತೀರ್ಪು ನೀಡಿತು. ಕಮಲೇಶನ್ ಅವರ ನಡೆಯನ್ನು ಮಿಲಿಟರಿ ನೀತಿಯ" ಉಲ್ಲಂಘನೆ ಎಂದು ನ್ಯಾಯಾಲಯ ಕರೆದಿದೆ.
Advertisement