

ಪಣಜಿ: ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.
ದಕ್ಷಿಣ ಗೋವಾದ ಪರ್ತಗಲಿಯಲ್ಲಿರುವ ಮಠದ ದೇವಾಲಯಕ್ಕೂ ಪಧಾನಿ ಮೋದಿ ಭೇಟಿ ನೀಡಿದರು. ಈ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದ್ದು, ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ ಮತ್ತು ಸಾರಸ್ವತ ಸಮುದಾಯದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ.
ಗುಜರಾತ್‌ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಹೇಳಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.
ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement