ಸೋನಿಯಾ, ರಾಹುಲ್ ಗಾಂಧಿ ವಿರುದ್ಧ FIR: ಮೋದಿ-ಅಮಿತ್ ಶಾ 'ದ್ವೇಷ ರಾಜಕಾರಣ' ಮುಂದುವರಿಸಿದ್ದಾರೆ- ಕಾಂಗ್ರೆಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಅವರ ಈ ಹೇಳಿಕೆಗಳು ಬಂದಿವೆ.
PM Narendra - ModiAmit Shah
ಪ್ರಧಾನಿ ನರೇಂದ್ರ ಮೋದಿ - ಅಮಿತ್ ಶಾ
Updated on

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, 'ಮೋದಿ-ಶಾ ಜೋಡಿ' ಪಕ್ಷದ ಉನ್ನತ ನಾಯಕತ್ವದ ವಿರುದ್ಧ ಕಿರುಕುಳ, ಬೆದರಿಕೆ ಮತ್ತು ಸೇಡಿನ ರಾಜಕೀಯವನ್ನು ಮುಂದುವರೆಸಿದೆ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

'ಪ್ರಧಾನಿ ನರೇಂದ್ರ ಮೋದಿ- ಅಮಿತ್ ಶಾ ಜೋಡಿಯು ಕಾಂಗ್ರೆಸ್‌ನ ಉನ್ನತ ನಾಯಕತ್ವದ ವಿರುದ್ಧ ಕಿರುಕುಳ, ಬೆದರಿಕೆ ಮತ್ತು ದ್ವೇಷದ ರಾಜಕೀಯವನ್ನು ಮುಂದುವರೆಸಿದೆ. ಬೆದರಿಕೆ ಹಾಕುವವರು ಸ್ವತಃ ಅಸುರಕ್ಷಿತರು ಮತ್ತು ಭಯಭೀತರಾಗಿದ್ದಾರೆ ಎಂದರ್ಥ. ನ್ಯಾಷನಲ್ ಹೆರಾಲ್ಡ್ ಸಂಪೂರ್ಣವಾಗಿ ನಕಲಿ ಪ್ರಕರಣವಾಗಿದೆ. ಅಂತಿಮವಾಗಿ ನ್ಯಾಯವು ಜಯಗಳಿಸುತ್ತದೆ. ಸತ್ಯಮೇವ ಜಯತೇ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ಉಸ್ತುವಾರಿ ಜೈರಾಮ್ ರಮೇಶ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇತರ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಅವರ ಈ ಹೇಳಿಕೆಗಳು ಬಂದಿವೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಅಕ್ಟೋಬರ್ 3 ರಂದು ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ದೂರು ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ ಖಾಸಗಿ ದೂರನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ, ಜಾರಿ ನಿರ್ದೇಶನಾಲಯ (ಇ.ಡಿ) 2021ರಲ್ಲಿ ತನಿಖೆಯನ್ನು ಪ್ರಾರಂಭಿಸಿತು.

PM Narendra - ModiAmit Shah
National Herald case: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ FIR ದಾಖಲು

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯ ಆರೋಪ ಹೊರಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಏಪ್ರಿಲ್ 9ರಂದು ದೋಷಾರೋಪ ಪಟ್ಟಿ ಸಲ್ಲಿಸಿದೆ. ಕಾಂಗ್ರೆಸ್ ಮುಖಂಡರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನು ಕೂಡ ಆರೋಪಿಗಳೆಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com