DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ ರೂ. 10083. 96 ಕೋಟಿ ಹೊರೆ ಬೀಳಲಿದೆ.
Casual Images
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್ ' ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕೇಂದ್ರ ಸರ್ಕಾರಿ ನೌಕರರ ಹೆಚ್ಚುವರಿ ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿ.ಆರ್) ಬಿಡುಗಡೆ ಮಾಡಲು ಅನುಮೋದನೆ ನೀಡಿದೆ.

ಪ್ರಸ್ತುತ ತುಟ್ಟಿ ಭತ್ಯೆ, ಪರಿಹಾರ ಮೊತತವು ಮೂಲ ವೇತನ, ಪಿಂಚಣಿಯ ಶೇ. 55 ರಷ್ಟಿದ್ದು, ಈಗ ಶೇ. 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಬೆಲೆ ಏರಿಕೆಯನ್ನು ಸರಿದೂಗಿಸಲು ಈ ವರ್ಷದ ಜುಲೈ 1 ರಿಂದ ಈ ಹೆಚ್ಚಳ ಪೂರ್ವಾನ್ವಯವಾಗಲಿದೆ.

ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ ರೂ. 10083. 96 ಕೋಟಿ ಹೊರೆ ಬೀಳಲಿದೆ.

Casual Images
ಕೇಂದ್ರ ಸರ್ಕಾರಿ ನೌಕರರು ತೇಜಸ್, ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ!

ಈ ಹೆಚ್ಚಳದಿಂದಾಗಿ ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68. 72 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com