ಯುದ್ಧ ಆರಂಭಿಸುವುದು ಆಪರೇಷನ್ ಸಿಂಧೂರದ ಉದ್ದೇಶವಾಗಿರಲಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಗುಜರಾತ್‌ನ ಭುಜ್‌ನಲ್ಲಿ ಸೈನಿಕರ ಗುಂಪನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.
"Jointness of armed forces that executed Op Sindoor in record time": Defence Minister Rajnath Singh
ರಕ್ಷಣಾ ಸಚಿವ ರಾಜನಾಥ್ ಸಿಂಗ್
Updated on

ನವದೆಹಲಿ: ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಎಲ್ಲ ಉದ್ದೇಶಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಪರಿಸ್ಥಿತಿಯನ್ನು ಉಲ್ಬಣಗೊಳಿಸುವ ಮೂಲಕ ಪಾಕಿಸ್ತಾನದೊಂದಿಗೆ ಯುದ್ಧ ಪ್ರಾರಂಭಿಸುವುದು ಅದರ ಗುರಿಯಾಗಿರಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಗುಜರಾತ್‌ನ ಭುಜ್‌ನಲ್ಲಿ ಸೈನಿಕರ ಗುಂಪನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ದಸರಾ ಸಂದರ್ಭದಲ್ಲಿ ರಕ್ಷಣಾ ಸಚಿವರು 'ಶಾಸ್ತ್ರ ಪೂಜೆ' (ಶಸ್ತ್ರಾಸ್ತ್ರ ಪೂಜೆ) ಮಾಡಿದರು.

ಆಪರೇಷನ್ ಸಿಂಧೂರದ ಸಮಯದಲ್ಲಿ ಪಾಕಿಸ್ತಾನ ಭಾರತದ ರಕ್ಷಣಾ ವ್ಯವಸ್ಥೆಯನ್ನು ಭೇದಿಸಲು ವಿಫಲ ಪ್ರಯತ್ನ ಮಾಡಿತು. ಆದರೆ, ಭಾರತೀಯ ಸೇನೆಯು ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ಮೇಲೆ ದಾಳಿ ಮಾಡಿತು ಮತ್ತು ಅದು ಎದುರಾಳಿಗೆ ಭಾರಿ ನಷ್ಟವನ್ನುಂಟುಮಾಡಬಹುದು ಎಂಬ ಸಂದೇಶವನ್ನು ಜಗತ್ತಿಗೆ ರವಾನಿಸಿತು ಎಂದು ರಾಜನಾಥ್ ಸಿಂಗ್ ಹೇಳಿದರು.

'ಆಪರೇಷನ್ ಸಿಂಧೂರ ಸಮಯದಲ್ಲಿ, ಪಾಕಿಸ್ತಾನವು ಲೇಹ್‌ನಿಂದ ಸರ್‌ಕ್ರೀಕ್‌ವರೆಗೆ ಭಾರತದ ರಕ್ಷಣಾ ವ್ಯವಸ್ಥೆಯನ್ನು ಭೇದಿಸಲು ವಿಫಲ ಪ್ರಯತ್ನ ಮಾಡಿತು. ಆದಾಗ್ಯೂ, ಪ್ರತೀಕಾರದ ಕ್ರಮದಲ್ಲಿ, ಭಾರತೀಯ ಪಡೆಗಳು ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಪಡಿಸಿದವು. ಭಾರತೀಯ ಪಡೆಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಪಾಕಿಸ್ತಾನದ ಮೇಲೆ ಭಾರಿ ನಷ್ಟವನ್ನುಂಟುಮಾಡಬಹುದು ಎಂಬ ಸಂದೇಶವನ್ನು ಜಗತ್ತಿಗೆ ರವಾನಿಸಿದವು' ಎಂದು ಅವರು ಹೇಳಿದರು.

"Jointness of armed forces that executed Op Sindoor in record time": Defence Minister Rajnath Singh
ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

'ಭಯೋತ್ಪಾದನೆ ವಿರುದ್ಧದ ಸೇನಾ ಕ್ರಮದಿಂದಾಗಿ ಭಾರತ ಸಂಯಮವನ್ನು ಪ್ರದರ್ಶಿಸಿತು. ಅದನ್ನು ತೀವ್ರಗೊಳಿಸುವುದು ಮತ್ತು ಯುದ್ಧವನ್ನು ಪ್ರಾರಂಭಿಸುವುದು ಆಪರೇಷನ್ ಸಿಂಧೂರದ ಉದ್ದೇಶವಾಗಿರಲಿಲ್ಲ. ಭಾರತೀಯ ಪಡೆಗಳು ಆಪರೇಷನ್ ಸಿಂಧೂರದ ಎಲ್ಲ ಸೇನಾ ಉದ್ದೇಶಗಳನ್ನು ಯಶಸ್ವಿಯಾಗಿ ಸಾಧಿಸಿವೆ ಎಂದು ನನಗೆ ಸಂತೋಷವಾಗಿದೆ. ಆದರೆ, ಭಯೋತ್ಪಾದನೆಯ ವಿರುದ್ಧ ನಮ್ಮ ಹೋರಾಟ ಮುಂದುವರೆದಿದೆ' ಎಂದು ಅವರು ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಭಾರತವು ಮೇ 7 ರಂದು ಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿತು.

'ನಮ್ಮ ಸಶಸ್ತ್ರ ಪಡೆಗಳ ಜಂಟಿ ಪ್ರಯತ್ನದಿಂದಲೇ ಆಪರೇಷನ್ ಸಿಂಧೂರವನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಲಾಯಿತು. ಇಂದು ಈ ಸಂದರ್ಭದಲ್ಲಿ, ಆಪರೇಷನ್ ಸಿಂಧೂರದ ಯಶಸ್ಸಿಗಾಗಿ ನಮ್ಮ ಧೈರ್ಯಶಾಲಿ ಸೈನಿಕರು ಮತ್ತು ಅಧಿಕಾರಿಗಳಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಲು ನಾನು ಬಯಸುತ್ತೇನೆ' ಎಂದು ಸಿಂಗ್ ಹೇಳಿದರು.

'ನಿಮ್ಮ ಕಾರ್ಯತಂತ್ರ, ಧೈರ್ಯ ಮತ್ತು ಸಾಮರ್ಥ್ಯವು ಭಾರತವು ಯಾವುದೇ ಪರಿಸ್ಥಿತಿಯಲ್ಲಿ ಶತ್ರುಗಳನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಸಾಬೀತುಪಡಿಸಿದೆ. ನಿಮ್ಮೆಲ್ಲರ ಧೈರ್ಯ, ನಿಮ್ಮೆಲ್ಲರ ಶೌರ್ಯವು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ರಕ್ಷಿಸುವುದನ್ನು ಮುಂದುವರಿಸುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ' ಎಂದು ಅವರು ಹೇಳಿದರು.

ಸೇನೆ, ವಾಯುಪಡೆ ಮತ್ತು ನೌಕಾಪಡೆಗಳನ್ನು ಭಾರತದ ಶಕ್ತಿಯ 'ಮೂರು ಸ್ತಂಭಗಳು' ಎಂದು ಬಣ್ಣಿಸಿದರು. ಈ ಮೂರು ಸೇವೆಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ನಾವು ಪ್ರತಿಯೊಂದು ಸವಾಲನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com