
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಒಬ್ಬ ವ್ಯಕ್ತಿಯ ಮೇಲಿನ ದ್ವೇಷದಲ್ಲಿ, ಕಾಂಗ್ರೆಸ್ ಸಾಂವಿಧಾನಿಕ ಹುದ್ದೆಗಳ ಘನತೆಯನ್ನು ಮರೆತುಬಿಡುತ್ತದೆ ಎಂದು ಬಿಜೆಪಿ ತಿರುಗೇಟು ನೀಡಿದೆ, ವಿರೋಧ ಪಕ್ಷದ ನಾಯಕರು ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. "ಮೋದಿ ವಿರೋಧಿ ಮತ್ತು ಭಾರತ ವಿರೋಧಿಯಾಗಿರುವುದು ಅವರ ಪ್ರಮಾಣಿತ ಕಾರ್ಯಾಚರಣಾ ವಿಧಾನವಾಗಿದೆ" ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ ಕಿಡಿ ಕಾರಿದ್ದಾರೆ.
Advertisement